More

    ವೈಶಿಷ್ಟ್ಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ನಾಗರಿಕರಿಗೆ ಬಿಬಿಎಂಪಿ ಮನವಿ

    ಬೆಂಗಳೂರು: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರ್ಣಗೊಂಡ ನಿಮಿತ್ತ ಈ ಬಾರಿ ವಿಶೇಷ ರೀತಿಯಲ್ಲಿ ‘ಕನ್ನಡ ರಾಜ್ಯೋತ್ಸವ’ ಆಚರಿಸಲು ಬಿಬಿಎಂಪಿ ಮುಂದಾಗಿದೆ.

    ನ.1ರಂದು ಪಾಲಿಕೆ ವ್ಯಾಪ್ತಿಯಲ್ಲಿ ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹ, ರಾಷ್ಟ್ರಗೀತೆ, ನಾಡಗೀತೆ, ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಬೇಕು. ಜತೆಗೆ, ಹುಯಿಲಗೊಳ ನಾರಾಯಣರಾಯರು ರಚಿಸಿರುವ ‘ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು’, ರಾಷ್ಟ್ರಕವಿ ಕುವೆಂಪು ಬರೆದಿರುವ ‘ ಎಲ್ಲಾದರು ಇರು ಎಂತಾದರು ಇರು’, ದ.ರಾ.ಬೇಂದ್ರೆ ಅವರ ‘ಒಂದೇ ಒಂದೇ ಕರ್ನಾಟಕ ಒಂದೇ’, ಸಿದ್ದಯ್ಯ ಪುರಾಣಿಕ ರಚಿಸಿರುವ ‘ಹೊತ್ತಿತೋ ಹೊತ್ತಿತೋ ಕನ್ನಡದ ದೀಪ’ ಹಾಗೂ ಚನ್ನವೀರಕಣವಿ ಅವರ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಗೀತೆಗಳನ್ನು ಹಾಡುವ ಮೂಲಕ ನುಡಿ ನಮನ ಸಲ್ಲಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಎಲ್ಲ ವಲಯ ಆಯುಕ್ತರಿಗೆ, ಜಂಟಿ ಆಯುಕ್ತರಿಗೆ ಹಾಗೂ ಮುಖ್ಯ ಅಭಿಯಂತರಿಗೆ ಸೂಚಿಸಿದ್ದಾರೆ.

    ಕನ್ನಡ ರಾಜ್ಯೋತ್ಸವ ದಿನದಂದು ನಗರದ ಎಲ್ಲ ಮನೆಗಳ ಮುಂದೆ ಕೆಂಪು, ಹಳದಿ ಬಣ್ಣದ ರಂಗೋಲಿ ಬಿಡಿಸಿ ‘ಕರ್ನಾಟಕ ಸಂಭ್ರಮ-50’ ಹೆಸರಾಯಿತು ಹಾಗೂ ‘ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯ ಬರೆಯುವಂತೆ ನಾಗರಿಕರಿಗೆ ಪಾಲಿಕೆ ಮನವಿ ಮಾಡಿದೆ. ಬೆಳಗ್ಗೆ 9ಕ್ಕೆ ಎಲ್ಲ ಆಕಾಶವಾಣಿ ಕೇಂದ್ರಗಳಲ್ಲಿ ನಾಡ ಗೀತೆ ಪ್ರಸಾರವಾಗಲಿದ್ದು, ಈ ವೇಳೆ ನಾಗರೀಕರು ಎದ್ದು ನಿಂತು ರಾಷ್ಟಗೀತೆಗೆ ಗೌರವ ಸಲ್ಲಿಸುವ ಮಾದರಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸಬೇಕು. ಸಂಜೆ 5ಕ್ಕೆ ಎಲ್ಲ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಬೇಕೆಂದು ಪಾಲಿಕೆ ಹೇಳಿದೆ.

    ಇದನ್ನೂ ಓದಿ: ರಾಜ್ಯದಲ್ಲಿ ಮೂರು ದಿನ ಮಳೆ: ಹಲವೆಡೆ ತಾಪಮಾನವೂ ಹೆಚ್ಚಳ

    ಸಂಜೆ 7 ಗಂಟೆಗೆ ಎಲ್ಲ ಮನೆ, ಕಚೇರಿಗಳು ಹಾಗೂ ಅಂಗಡಿ ಮಳಿಗೆಗಳ ಮುಂದೆ ದೀಪ ಹಚ್ಚುವ ಮೂಲಕ ಕನ್ನಡ ಜ್ಯೋತಿಯನ್ನು ಬೆಳಗಬೇಕು. ಸಂಘ ಸಂಸ್ಥೆಗಳು, ಹೋಟೆಲ್ ಯೂನಿಯನ್‌ಗಳ ಸಹಯೋಗದಲ್ಲಿ ಆಟದ ಮೈದಾನ, ಉದ್ಯಾನ, ಕೆರೆ ಆವರಣ, ಅಪಾರ್ಟ್‌ಮೆಂಟ್, ಮಾಲ್‌ಗಳು ಸೇರಿ ಇತರೆ ಸ್ಥಳಗಳಲ್ಲಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ನಡೆಸುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಆಯುಕ್ತರು ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts