More

    ಮತದಾರರ ಮಾಹಿತಿ ಕಳವು ಪ್ರಕರಣ: ಚಿಲುಮೆ ಸಂಸ್ಥೆಯ ಮಲ್ಲೇಶ್ವರಂ ಕಚೇರಿ ಮೇಲೆ ಪೊಲೀಸರ ದಾಳಿ

    ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿರುವ ಸಂಬಂಧ ದೂರು ದಾಖಲಾದ ಬೆನ್ನಲ್ಲೇ ಮಲ್ಲೇಶ್ವರಂನ ಚಿಲುಮೆ ಕಚೇರಿ ಮೇಲೆ ಹಲಸೂರು ಗೇಟ್ ಪೊಲೀಸರು ದಾಳಿ ಮಾಡಿದ್ದಾರೆ.

    ಚಿಲುಮೆ ಸಂಸ್ಥೆಯಿಂದ ಅಕ್ರಮವಾಗಿ ಮತದಾರರ ಖಾಸಗಿ ಮಾಹಿತಿ ಸಂಗ್ರಹ ಹಿನ್ನಲೆಯಲ್ಲಿ ಬಿಬಿಎಂಪಿ ಜಂಟಿ ಆಯುಕ್ತ ರಂಗಪ್ಪ ಅವರು ದೂರು ನೀಡಿದ್ದರು. ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ‌ ಮಧ್ಯೆ ಮಲ್ಲೇಶ್ವರಂನ ಚಿಲುಮೆ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

    ಹಲಸೂರು ಗೇಟ್ ಎಸಿಪಿ ನಾರಾಯಣಸ್ವಾಮಿ, ಇನ್ಸ್​ಪೆಕ್ಟರ್​ ಜಗದೀಶ್, ಸಬ್ ಇನ್ಸ್​ಪೆಕ್ಟರ್​ ಕುಮಾರ್ ಸೇರಿದಂತೆ 10ಕ್ಕೂ ಹೆಚ್ಚು ಸಿಬ್ಬಂದಿಯಿಂದ ದಾಳಿ ನಡೆದಿದ್ದು, ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಇಡೀ ಕಚೇರಿಯನ್ನು ತಮ್ಮ ಸುಪರ್ದಿಗೆ ಪಡೆದಿದ್ದಾರೆ.

    ಚಿಲುಮೆ ಸಂಸ್ಥೆಯಿಂದ ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹ ಆರೋಪ ಸಂಬಂಧ ಹಲಸೂರ್ ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಬೆನ್ನಲ್ಲೇ ತನಿಖೆ ಚುರುಕುಗೊಂಡಿದೆ. ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಕೇಂದ್ರ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮೊದಲ ಬಾರಿಗೆ ಇಬ್ಬರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಚಿಲುಮೆ ಸಂಸ್ಥೆಯ ಬ್ಯುಸಿನಸ್ ಹೆಡ್ ಸುಧಾಕರ್ ನಾಯರ್ ಮತ್ತು ಕಚೇರಿ ವರ್ಕರ್ ರಕ್ಷಿತ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ವಿಚಾರಣೆ ವೇಳೆ ಚಿಲುಮೆ ಸಿಬ್ಬಂದಿ ಒಂದೊಂದೇ ಸಬೂಬು ಹೇಳ್ತಿದ್ದಾರೆ. ತಮ್ಮದು ಬ್ಯುಸಿನಸ್ ವಿಚಾರವಷ್ಟೇ, ಮತದಾರರ ಮಾಹಿತಿ ಸಂಗ್ರಹ ವಿಚಾರ ಗೊತ್ತಿಲ್ಲವೆಂದು ಸುಧಾಕರ್ ಹೇಳಿಕೆ ನೀಡುತ್ತಿದ್ದಾರೆ. ಸದ್ಯ ಅಜ್ಞಾತ ಸ್ಥಳದಲ್ಲಿ ಇಬ್ಬರನ್ನ ವಿಚಾರಣೆ ಮಾಡಲಾಗುತ್ತಿದೆ. (ದಿಗ್ವಿಜಯ ನ್ಯೂಸ್​)

    ನಿಮ್ಮ ಕಣ್ಣಿಗೊಂದು ಸವಾಲು: ಸಾಧ್ಯವಾದರೆ ಈ ಫೋಟೋದಲ್ಲಿರುವ ಪಕ್ಷಿಯನ್ನು ಗುರುತಿಸಿ…

    ಕೊಪ್ಪಳದ ಮೆಟ್ರಿಕ್​ ಪೂರ್ವ ವಸತಿ ಶಾಲೆಯಲ್ಲಿ ಊಟ ಸೇವಿಸಿದ 20 ವಿದ್ಯಾರ್ಥಿನಿಯರಿಗೆ ವಾಂತಿ ಭೇದಿ…

    ರಾಜಕೀಯ ಕಿರುಕುಳ ಆರೋಪ: ಡೆತ್​ನೋಟ್​ ಬರೆದಿಟ್ಟು ಕೆರೆಗೆ ಹಾರಿ ಪ್ರಾಣಬಿಟ್ಟ ದೊಡ್ಡಬಳ್ಳಾಪುರದ ಬಿಜೆಪಿ ಕಾರ್ಯಕರ್ತ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts