More

    ಮತದಾರರ ದತ್ತಾಂಶ ಕಳವು? ಕಾಂಗ್ರೆಸ್​ ಆರೋಪ, ತನಿಖೆಗೆ ಮುಖ್ಯಮಂತ್ರಿ ಸೂಚನೆ

    ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಗೆ ಎರಡು ಖಾಸಗಿ ಸಂಸ್ಥೆಗಳಿಗೆ ಅನುಮತಿ ನೀಡುವ ಮೂಲಕ ಗೌಪ್ಯ ಮಾಹಿತಿಗೆ ಕನ್ನ ಹಾಕಲಾಗಿದ್ದು ಈ ಬಗ್ಗೆ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕೆಂದು ಕಾಂಗ್ರೆಸ್​ ಒತ್ತಾಯ ಮಾಡಿದೆ. ಪ್ರಕರಣದ ತನಿಖೆ ನಡೆಸುವಂತೆ ಬಿಬಿಎಂಪಿ ಅಯುಕ್ತರಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

    ಬೆಂಗಳೂರು ನಗರದ ಉಸ್ತುವಾರಿ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಎ್​ಐಆರ್​ ದಾಖಲಿಸಿ ಆರೋಪಿಗಳನ್ನು ಬಂಧಿಸಬೇಕು. ಜತೆಗೆ, ಈ ಅಕ್ರಮಕ್ಕೆ ಕಾರಣವಾದವರನ್ನು ಸಹ ಬಂಧಿಸಬೇಕೆಂದು ಕಾಂಗ್ರೆಸ್​ ಆಗ್ರಹಿಸಿದೆ.

    ಬೆಂಗಳೂರಿನ ಕ್ವೀನ್ಸ್​ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ತುರ್ತು ಸುದ್ದಿಗೋಷ್ಠಿ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್​ ಸುರ್ಜೇವಾಲ, ಪಿಸಿಸಿ ಅಧ್ಯ ಡಿ.ಕೆ. ಶಿವಕುಮಾರ್​, ವಿಧಾನಸಭೆ ವಿರೋಧ ಪದ ನಾಯಕ ಸಿದ್ದರಾಮಯ್ಯ ಹಾಗೂ ಇತರರು, ಮತದಾರರ ಮಾಹಿತಿ ಕಳವಿನ ಆರೋಪ ಮಾಡಿದರು. ಚಿಲುಮೆ ಎಜುಕೇಶನ್​ ಇನ್​ಸ್ಟಿಟ್ಯೂಟ್​ ಎಂಬ ಖಾಸಗಿ ಸಂಸ್ಥೆ ಮತದಾರರ ಜಾಗೃತಿ ಹಾಗೂ ಮತದಾರರ ಪಟ್ಟಿಯನ್ನು ಉಚಿತವಾಗಿ ಪರಿಷ್ಕರಣೆ ಮಾಡುತ್ತೇವೆ ಎಂದು 2022ರ ಆ.19ಕ್ಕೆ ಸರ್ಕಾರಕ್ಕೆ ಅರ್ಜಿ ಹಾಕಿತ್ತು.

    ಕಾಂಗ್ರೆಸ್​ನವರು ತಮ್ಮವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ. ಚುನಾವಣಾ ಆಯೋಗ ಸ್ವೀಪ್​ ಕಾರ್ಯಕ್ರಮ ಕೈಗೊಳ್ಳಲು ಬಿಬಿಎಂಪಿ ಹಾಗೂ ಸ್ಥಳಿಯ ಸಂಸ್ಥೆಗಳಿಗೆ ವಹಿಸಿರುತ್ತಾರೆ. ಅವರು ಸಮೀಾ ಕೆಲಸವನ್ನು ಎನ್​ಜಿಓಗಳಿಗೆ ನೀಡಿರುತ್ತಾರೆ. ಇದೇನು ಮೊದಲ ಬಾರಿ ನೀಡಿರುವುದಲ್ಲ. 2018ರಲ್ಲಿ ಇದ್ದ ಸರ್ಕಾರದ ಕಾಲದಲ್ಲಿಯೂ ನೀಡಿದ್ದಾರೆ. ಕಾಂಗ್ರೆಸ್​ನವರು ನನ್ನ ರಾಜೀನಾಮೆಗೆ ಒತ್ತಾಯಿಸುವುದು ಹಾಸ್ಯಾಸ್ಪದ. ಸಿದ್ದರಾಮಯ್ಯ ಸರ್ಕಾರ 200 ಕೋಟಿ ರೂ. ಖರ್ಚು ಮಾಡಿ ಜಾತಿ ಸಮೀೆ ಮಾಡಿ ಗೌಪ್ಯವಾಗಿಟ್ಟಿದ್ದು ಏಕೆ?

    | ಬಸವರಾಜ ಬೊಮ್ಮಾಯಿ ಸಿಎಂ

    ಆಪರೇಷನ್​ ಕಮಲದ ಮುಂದುವರಿದ ಭಾಗವಾದ “ಆಪರೇಷನ್​ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿಯೇ ತನಿಖೆ ಮಾಡಬೇಕು. ಏಕೆಂದರೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ.

    | ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕ

    https://www.vijayavani.net/mandya-annayya-life-is-tragic-end-in-banglore/

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts