More

    77ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮಾಣಿಕ್ ಷಾ ಪರೇಡ್ ಗ್ರೌಂಡ್​ ಸಜ್ಜು: ಏನೆಲ್ಲಾ ಸಿದ್ಧತೆ ನಡೆದಿದೆ? ಇಲ್ಲಿದೆ ಮಾಹಿತಿ…

    ಬೆಂಗಳೂರು: ಇದೇ ಆಗಸ್ಟ್​ 15ರಂದು ಇಡೀ ದೇಶವು 77ನೇ ಸ್ವಾಂತಂತ್ರ್ಯ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ. ಪ್ರತಿವರ್ಷದಂತೆ ಈ ವರ್ಷವೂ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರೆ, ರಾಜ್ಯದಲ್ಲಿ ರಾಜಧಾನಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ಮಾಡಲಿದ್ದಾರೆ. ಹೀಗಾಗಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

    ಮಾಣಿಕ್ ಷಾ ಪರೇಡ್ ಗ್ರೌಂಡ್​ನಲ್ಲಿ ನಡೆದಿರುವ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಬಿಬಿಎಂಪಿಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಹಾಗೂ ನಗರ ಪೊಲೀಸ್ ಆಯುಕ್ತರಾದ ದಯಾನಂದ್ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

    ಇದನ್ನೂ ಓದಿ: ನಿರ್ಜನ ಪ್ರದೇಶದಲ್ಲಿ ಗೆಳೆಯರ ಜತೆ ಒಬ್ಬಳೇ ಯುವತಿ: ಅಲ್ಲಿಗೆ ಹೋದ ಸ್ಥಳೀಯರಿಗೆ ಕಾದಿತ್ತು ಶಾಕ್​!

    ಏನೇನು ಸಿದ್ಧತೆಗಳನ್ನು ಮಾಡಲಾಗಿದೆ

    * ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭಕ್ಕಾಗಿ ಮಾಣಿಕ್​ ಷಾ ಪರೇಡ್​ ಮೈದಾನವನ್ನು ಸಿದ್ಧಗೊಳಿಸಲಾಗಿದೆ.
    * ಶಾಮಿಯಾನ, ವೇದಿಕೆಯ ನಿರ್ಮಾಣ, ಬ್ಯಾರಿಕೇಡಿಂಗ್ ಮತ್ತು ಆಸನಗಳ ವ್ಯವಸ್ಥೆ ಮಾಡಲಾಗಿದೆ.
    * ವೇದಿಕೆಗೆ ಅಲಂಕಾರಿಕ ಬ್ರಾಸ್ ಪರಿಕರಗಳನ್ನು ಆಳವಡಿಸಲಾಗುತ್ತದೆ.
    * ಧ್ವಜಾರೋಹಣ ಮಾಡಲು ಧ್ವಜ ಸ್ಥಂಭ ನಿರ್ಮಿಸಲಾಗಿದೆ.
    * ಆಗಸ್ಟ್​ 15ರಂದು ಬೆಳಗ್ಗೆ 8. 55ಕ್ಕೆ ಮುಖ್ಯಮಂತ್ರಿಗಳು ಮೈದಾನಕ್ಕೆ ಆಗಮಿಸಲಿದ್ದು, ಭಾರತೀಯ ರಕ್ಷಣಾಸೇವೆಯ ಮೂವರು ಹಿರಿಯ ಅಧಿಕಾರಿಗಳನ್ನು ಮುಖ್ಯಮಂತ್ರಿಗಳಿಗೆ ಪರಿಚಯಿಸಲಾಗುತ್ತದೆ. ಮುಖ್ಯಮಂತ್ರಿಗಳು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ.
    * ಧ್ವಜಾರೋಹಣದ ನಂತರ ಮುಖ್ಯಮಂತ್ರಿಗಳು ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಿದ ನಂತರ ನಾಡಿನ ಜನತೆಗೆ ಸ್ವಾತಂತ್ರೋತ್ಸವದ ಸಂದೇಶ ನೀಡುತ್ತಾರೆ. ನಂತರ ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ.

    Independence Day Program

    ಭದ್ರೆತೆ ಹೇಗಿರಲಿದೆ?

    ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಪ್ರಯುಕ್ತ ಮೈದಾನಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ, ಮೈದಾನದಲ್ಲಿ ಭದ್ರತೆ ಮತ್ತು ಸುರಕ್ಷತೆಗಾಗಿ 100 (ನೂರು) ಸಿ.ಸಿ. ಕ್ಯಾಮೆರಾ ವ್ಯವಸ್ಥೆ ಹಾಗೂ 12 ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಪ್ರತಿಕ್ರಿಯಿಸಲು ಅಗತ್ಯವಿರುವಷ್ಟು ಆಂಬ್ಯುಲೆನ್ಸ್‌ಗಳನ್ನು ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿರುತ್ತದೆ ಹಾಗೂ ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ, ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಆಕಸ್ಮಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿದೆ.

    ಇದನ್ನೂ ಓದಿ: ಭಾರತದಲ್ಲೂ UFO ಪತ್ತೆ!? ಮಲಯಾಳಂ ನಟಿ ಹಂಚಿಕೊಂಡ ಇನ್​ಸ್ಟಾಗ್ರಾಂ ಪೋಸ್ಟ್​ ವೈರಲ್​​

    ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸುವ ಅತಿಗಣ್ಯ/ ಗಣ್ಯ/ ಇತರೆ ಆಹ್ವಾನಿತರಿಗೆ/ ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಈ ಕೆಳಕಂಡಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ.

    * ಜಿ2 ಪ್ರವೇಶ ದ್ವಾರ: ಅತಿಗಣ್ಯ ವ್ಯಕ್ತಿಗಳು/ ಗಣ್ಯವ್ಯಕ್ತಿಗಳು/ ಸ್ವಾತಂತ್ರ್ಯಹೋರಾಟಗಾರರು/ ರಕ್ಷಣಾ ಇಲಾಖೆಯ ಅಧಿಕಾರಿಗಳು ಪತ್ರಿಕಾ ಪ್ರತಿನಿಧಿಗಳಿಗಾಗಿ ಮೀಸಲು.

    * ಜಿ 3 ಪ್ರವೇಶ ದ್ವಾರ: ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳು/ ನಿವೃತ್ತ ಸೇನಾಧಿಕಾರಿಗಳು/ ಬಿಎಸ್ ಎಫ್ ಅಧಿಕಾರಿಗಳಿಗಾಗಿ ಮೀಸಲು.

    * ಜಿ4 ಪ್ರವೇಶ ದ್ವಾರ:
    ಸಾರ್ವಜನಿಕರಿಗಾಗಿ ಮೀಸಲು.

    ಸಾರ್ವಜನಿಕರಿಗಾಗಿ ಇರುವ ವೀಕ್ಷಣಾ ಗ್ಯಾಲರಿಯನ್ನು ವಿಸ್ತರಿಸಿ ಹೆಚ್ಚು ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

    ಸೊಂಟಕ್ಕೆ ಮಗು ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ: ಗಂಡ ಸತ್ತ ದಿನವೇ ನಡೆಯಿತು ಘೋರ ದುರಂತ

    ಸುಧಾಮೂರ್ತಿಗೆ ನಟ ಪ್ರಭಾಸ್ ಸಿನಿಮಾದ ಯಾವ ಹಾಡು ತುಂಬಾ ಇಷ್ಟ ಗೊತ್ತಾ?

    ಚಿತ್ರದುರ್ಗದ ಮಲ್ಲಾಪುರ ಬಳಿ ಡೆಡ್ಲಿ ಅಪಘಾತ: ಮಲೆನಾಡಿಗೆ ಹೊರಟಿದ್ದ ಒಂದೇ ಕುಟುಂಬದ ನಾಲ್ವರ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts