ಬಿಬಿಎಂಪಿ ಗುತ್ತಿಗೆದಾರರ ಸಂಘದ ನೂತನ ಡೈರಿ ಬಿಡುಗಡೆ

contractor
Published on

ಬೆಂಗಳೂರು: ನಗರದ ಸೆಂಚುರಿ ಕ್ಲಬ್​​​ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದ ನೂತನ ಡೈರಿಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಬಿಡುಗಡೆ ಮಾಡಿದರು. ಇದೇ ವೇಳೆ ಗುತ್ತಿಗೆದಾರರಿಗೆ ಹೊಸ ವರ್ಷದ ಶುಭಾ ಹಾರೈಸಿ, ಮುಂದಿನ ದಿನಗಳಲ್ಲಿ ಒಟ್ಟಿಗೆ ಇನ್ನಷ್ಟು ಒಳ್ಳೆಯ ಕೆಲಸ ಮಾಡೋಣ ಎಂದರು.

ಕಾಮಗಾರಿಯ ಬಾಕಿ ಬಿಲ್​​ಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಂಘದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜೆ.ಎಂ. ನಂದಕುಮಾರ್​ ಹೇಳಿದರು. ಮುಂದಿನ ದಿನಗಳಲ್ಲಿ ಸಂಘಕ್ಕೆ ಇನ್ನಷ್ಟು ಸಹಕಾರ ನೀಡುವಂತೆ ಕೋರಿದರು. ಸಂಘದ ಪದಾಧಿಕಾರಿಗಳು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net