More

    ನಾಳೆ ಪೂರ್ವಭಾವಿ ಸಭೆಯಲ್ಲಿ ಹೋರಾಟದ ಬಗ್ಗೆ ಬಿಬಿಎಂಪಿ ನೌಕರರು ಚರ್ಚೆ

    ಬೆಂಗಳೂರು: ಬಡ್ತಿ ಸಿಕ್ಕಿರುವ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸುವುದು, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಸೇರಿ ವಿವಿಧ ಸಮಸ್ಯೆಗಳ ಈಡೇರಿಕೆಗಾಗಿ ಮುಂದಿನ ಹೋರಾಟ ಹಮ್ಮಿಕೊಳ್ಳುವ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ, ಗುರುವಾರ (ಅ.26) ಸಭೆ ಆಯೋಜಿಸಿದೆ. ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಸಂಜೆ 5ಕ್ಕೆ ನಡೆಯುವ ‘ಪೂರ್ವಭಾವಿ ಸಭೆ’ಯಲ್ಲಿ ಮುಂದಿನ ಹೋರಾಟ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗುತ್ತದೆ.

    ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಅಧಿಕಾರಿಗಳಿಗೆ 5 ತಿಂಗಳ ಹಿಂದೆ ವಲಯ ಸಹಾಯಕ ಆಯುಕ್ತರ ವೃಂದಕ್ಕೆ ಹಾಗೂ ಕಂದಾಯ ಅಧಿಕಾರಿ ವೃಂದಕ್ಕೆ ಮುಂಬಡ್ತಿ ನೀಡಿದ್ದರೂ ಇದುವರೆಗೆ ಸರ್ಕಾರ ಯಾವುದೇ ಸ್ಥಳ ನಿಯುಕ್ತಿಗೊಳಿಸಿಲ್ಲ. ವೃಂದ ಮತ್ತು ನೇಮಕಾರಿ ಉಲ್ಲಂಘಿಸಿ ನಿಯಮಬಾಹಿರವಾಗಿ ಎರವಲು ಸೇವೆ ಮಾಡುತ್ತಿರುವ ಅಧಿಕಾರಿಗಳನ್ನು ಮಾತೃ ಇಲಾಖೆಗೆ ಕಳುಹಿಸಬೇಕು. ಪಾಲಿಕೆಯಲ್ಲಿ ಮಂಜೂರಾಗಿರುವ ಒಟ್ಟು 12,945 ಹುದ್ದೆಗಳ ಪೈಕಿ 6,414 ಹುದ್ದೆಗಳು ಖಾಲಿ ಉಳಿದಿವೆ. ಹಲವು ವರ್ಷಗಳಿಂದ ಹೊಸ ನೇಮಕ ಪ್ರಕ್ರಿಯೆ ನಡೆಯದ ಹಿನ್ನೆಲೆಯಲ್ಲಿ ಹಾಲಿ ಸಿಬ್ಬಂದಿಗೆ ಕಾರ್ಯದೊತ್ತಡ ಹೆಚ್ಚಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್ ಹೇಳಿದ್ದಾರೆ.

    ಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಿರಿಯ ಆರೋಗ್ಯ ಪರಿವೀಕ್ಷಕರು, ಶಿಕ್ಷಕರು, ಉಪನ್ಯಾಸಕರು, ಗಣಕಯಂತ್ರ ನಿರ್ವಾಹಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಆಧಾರದ ಮೇಲೆ ಸಂಬಳ ನೀಡಬೇಕು. 198 ವಾರ್ಡ್‌ಗಳಿಂದ 225 ವಾರ್ಡ್‌ಗಳಿಗೆ ಹೆಚ್ಚಿಸಲಾಗಿದ್ದು, ಹೊಸದಾಗಿ ರಚಿಸಿರುವ ವಾರ್ಡ್‌ಗಳಿಗೆ ಅಗತ್ಯ ಸಿಬ್ಬಂದಿ ನೇಮಿಸಲು ಅನುಮೋದನೆ ನೀಡಬೇಕು. ಪಾಲಿಕೆಯಲ್ಲಿ 800ಕ್ಕೂ ಅಧಿಕ ಮಾರ್ಷಲ್‌ಗಳನ್ನು ಕಾನೂನುಬಾಹಿರವಾಗಿ ನಿಯೋಜಿಸಲಾಗಿದೆ. ಇದನ್ನು ರದ್ದುಪಡಿಸಬೇಕು. ಸಂಘದ ಸ್ವಂತ ಖರ್ಚಿನಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಅವಕಾಶ ನೀಡಬೇಕು.

    ಇದನ್ನೂ ಓದಿ: ಹಬ್ಬ ನಿಮಿತ್ತ ರಾಜದಾನಿಯಲ್ಲಿ ತ್ಯಾಜ್ಯ ಹೆಚ್ಚಳ

    ಈ ಮೇಲಿನ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ ಈಗಾಗಲೇ ಸರ್ಕಾರಕ್ಕೆ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಇದುವರೆಗೆ ನಮಗೆ ಭರವಸೆ ನೀಡುತ್ತಿದ್ದಾರೆ ಹೊರತು ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿಲ್ಲ. ಹೀಗಾಗಿ, ಈ ಬಾರಿ ಪಾಲಿಕೆ ಕೆಲಸ ಕಾರ್ಯವನ್ನು ಸ್ಥಗಿತಗೊಳಿಸಿ ಬೃಹತ್ ಪ್ರತಿಭಟನೆ ನಡೆಸಲು ನಾವೆಲ್ಲರೂ ಸಿದ್ಧರಾಗಿದ್ದೇವೆ ಎಂದು ಅಮೃತ್‌ರಾಜ್ ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts