ಬಿಬಿಎಂಪಿ ಮಾಜಿ ಮೇಯರ್​ ಸಂಪತ್​ರಾಜ್​ ಆಟೋದಲ್ಲಿ ಸಂಚರಿಸುತ್ತಿರುವುದೇಕೆ!?: ಬಂಧನದ ಭೀತಿ ಕಾಡ್ತಿದೆಯಾ ಅವರಿಗೆ?

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಬಿಎಂಪಿಯ ಮಾಜಿ ಮೇಯರ್ ಸಂಪತ್ ರಾಜ್​ ಅವರಿಗೆ ಇದೀಗ ಎರಡನೇ ಬಾರಿ ಸಿಸಿಬಿ ನೋಟಿಸ್ ಜಾರಿಗೊಳಿಸಿದೆ. ಈ ನಡುವೆ, ಅವರು ಸ್ವಂತ ಕಾರು ಬಿಟ್ಟು ಆಟೋದಲ್ಲಿ ಸಂಚರಿಸುತ್ತಿರುವುದು ಎಲ್ಲರ ಕುತೂಹಲ ಕೆರಳಿಸಿದೆ. ಅವರೇನಾದರೂ ಸಿಸಿಬಿ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡ್ತಿದ್ದಾರೆಯೇ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಅನಾರೋಗ್ಯ ?

ಸಿಸಿಬಿ ಎರಡನೇ ನೋಟಿಸ್ ಜಾರಿಗೊಳಿಸಿದ ಬೆನ್ನಿಗೇ ಸಂಪತ್ ರಾಜ್ ಅನಾರೋಗ್ಯದ ಕಾರಣ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಸಮಸ್ಯೆ ಏನು ಎಂಬ ಮಾಹಿತಿ ಲಭ್ಯವಿಲ್ಲ. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗುವುದು ಸಂದೇಹ ಎಂಬ ಮಾತು ಕೂಡ ಕೇಳಬಂದಿದೆ.

ಆ.11ರಂದು ಫೇಸ್‌ಬುಕ್‌ನಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಹೋದರಳಿಯ ನವೀನ್ ಫೇಸ್‌ಬುಕ್‌‌ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ. ಇದನ್ನೇ ಮುಂದಿಟ್ಟುಕೊಂಡು ಕೆಲ ಕಿಡಿಗೇಡಿಗಳು ಗಲಭೆ ಸೃಷ್ಟಿಸಿ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣೆಗೆ ಬೆಂಕಿ ಹಚ್ಚಿದ್ದರು. ಶಾಸಕರ ಮನೆಗೂ ಬೆಂಕಿ ಹಚ್ಚಿ ದಾಂಧಲೆ ಮಾಡಿ ಅಶಾಂತಿ ಸೃಷ್ಟಿಸಿದ್ದರು.

ಈ ಪ್ರಕರಣದ ವಿಚಾರಣೆ ಸಲುವಾಗಿ ಸಿಸಿಬಿ ಪೊಲೀಸರು ಮಾಜಿ ಮೇಯರ್ ಸಂಪತ್ ರಾಜ್‌ಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದರು. ಇದೀಗ ಮತ್ತೆ 2ನೇ ಬಾರಿ ವಿಚಾರಣೆಗೆ ಕರೆದಿದ್ದು, ಶುಕ್ರವಾರ ಚಾಮರಾಜಪೇಟೆ ಸಿಸಿಬಿ ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಸೂಚನೆ ನೀಡಿರುವುದಾಗಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಇದರಿಂದ ಮತ್ತೆ ಸಂಪತ್ ರಾಜ್‌ಗೆ ಗಲಭೆ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದ್ದು, ಕಾರಿನಲ್ಲಿ ಓಡಾಟ ಬಿಟ್ಟು ಆಟೋದಲ್ಲಿ ಸಂಚಾರ ನಡೆಸುತ್ತಿದ್ದಾರೆ. ತಮ್ಮ ವಕೀಲರ ಭೇಟಿ ಮಾಡಿ ಕಾನೂನಾತ್ಮಕ ಸಲಹೆಗೆ ಮುಂದಾಗಿದ್ದು, ಬಂಧನ ಭೀತಿ ಎದುರಾಗಿದೆ.

ದಸರಾ ವಿಶೇಷ- ರತ್ನಖಚಿತ ಸಿಂಹಾಸನ ಜೋಡಣೆ ಇಂದು

Share This Article

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…

ನೀವಿದನ್ನು ನಿತ್ಯವೂ ಚಾಚೂ ತಪ್ಪದೇ ಅನುಸರಿಸಿದರೆ ನೀವು ಖಂಡಿತ ಶ್ರೀಮಂತರಾಗ್ತೀರಿ! Rich Person

ಇಂದು ಪ್ರತಿಯೊಬ್ಬರು ಶ್ರೀಮಂತರಾಗಲು ( Rich Person ) ಬಯಸುತ್ತಾರೆ. ತಾವು ದುಡಿದ ಹಣವನ್ನು ಸರಿಯಾದ…