More

    ರಾಜಧಾನಿಯಲ್ಲಿ ವನ್ಯಜೀವಿ ರಕ್ಷಣೆಗೆ ಸಹಾಯವಾಣಿ ಆರಂಭ

    ಬೆಂಗಳೂರು: ವಿಶ್ವ ವನ್ಯಜೀವಿ ದಿನದ ಅಂಗವಾಗಿ ಪಾಲಿಕೆ ಕೇಂದ್ರ ಕಚೇರಿ ಮುಂಭಾಗ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವನ್ಯಜೀವಿ ಸಂರಕ್ಷಣಾ ವಾಹನಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಶುಕ್ರವಾರ ಚಾಲನೆ ನೀಡಿದರು.

    ವನ್ಯಜೀವಿ ರಕ್ಷಣೆಗಾಗಿ ಒಂದು ವಾಹನ ಕಾರ್ಯ ನಿರ್ವಹಿಸುತ್ತಿತ್ತು. ಈಗ ಪ್ರತ್ಯೇಕವಾಗಿ 2 ಹೊಸ ವಾಹನ ಮೀಸಲಿಡಲಾಗಿದೆ. ವಾಹನದಲ್ಲಿ ಒಬ್ಬ ಚಾಲಕ, ಇಬ್ಬರು ವನ್ಯಜೀವಿ ಸಂರಕ್ಷರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ವಿವಿಧ ಪ್ರಾಣಿ-ಪಕ್ಷಿಗಳ ರಕ್ಷಣಾ ಸಲಕರಣೆಗಳು, ಚಿಕ್ಕ ಪ್ರಾಣಿ ಹಿಡಿಯಲು ಸ್ಕೈ ಕೆನಲ್, ಹಕ್ಕಿ ಹಿಡಿಯಲು ಬ್ಯಾಸ್ಕೆಟ್, ಹಾವು ಹಿಡಿಯಲು ಹುಕ್ ಮತ್ತು ಬ್ಯಾಗ್ ಒಳಗೊಂಡ ಬ್ಯಾಗ್ ಇರಲಿದೆ. ಪಾಲಿಕೆಯ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಹಾವು, ಪಕ್ಷಿ, ಮಂಗ ಸೇರಿ ಇತರ ಪ್ರಾಣಿಗಳನ್ನು ಕಾಪಾಡುವ ಉದ್ದೇಶದಿಂದ 9 ವನ್ಯಜೀವಿ ಸಂರಕ್ಷಕರಿದ್ದು, ಸಾರ್ವಜನಿಕರಿಂದ ದೂರು ಬಂದ ತಕ್ಷಣ ವನ್ಯಸಂರಕ್ಷಕರು ಸ್ಥಳಕ್ಕೆ ತೆರಳಿ ರಕ್ಷಿಸಿ ಅವುಗಳಿಗೆ ಚಿಕಿತ್ಸೆ ಕೊಟ್ಟು ಕಾಡಿಗೆ ಬಿಡಲಿದ್ದಾರೆ ಎಂದು ತುಷಾರ್ ಗಿರಿನಾಥ್ ಹೇಳಿದರು.

    ಇದನ್ನೂ ಓದಿ: ಗಂಡ ಶಾಪಿಂಗ್​ಗೆ ಹಣ ಕೊಟ್ಟಿಲ್ಲ ಅಂತ ಲವರ್​ನ ಕರೆಸಿ ಹೊಡೆಸಿದ ಹೆಂಡತಿ!

    ವನ್ಯಜೀವಿ ರಕ್ಷಣೆಗಾಗಿ ಸಾರ್ವಜನಿಕರು ಬಿಬಿಎಂಪಿಯ ಸಹಾಯವಾಣಿ 080 22225659, 080 22221188ಕ್ಕೆ ಕರೆ ಮಾಡಬಹುದು. ಪಾಲಿಕೆಯ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ, ವಿಶೇಷ ಭೂಸ್ವಾಧೀನ ಅಧಿಕಾರಿ ಪ್ರತೀಕ್ ಬಾಯಲ್, ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಸರೀನಾ ಸಿಕ್ಕಲಿಗರ್ ಮತ್ತಿತರರಿದ್ದರು.

    ಕಲ್ಯಾಣ ಮಂಟಪದಲ್ಲೇ ಕುಸಿದು ಬಿದ್ದ ವರ; ಆಸ್ಪತ್ರೆಯ ಮಾರ್ಗಮಧ್ಯೆ ಸಾವು

    ಟ್ರಾಫಿಕ್ ಫೈನ್, ಮತ್ತೆ 50% ಆಫರ್​​: ಎಷ್ಟು ದಿನಗಳವರೆಗೆ ಅವಕಾಶ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts