"ಕಾಟೇರ" ನಿರ್ಮಾಪಕ ರಾಕ್​ಲೈನ್ ಒಡೆತನದ​ ಮಾಲ್​​ಗೆ ಬೀಗ ಜಡಿದ ಬಿಬಿಎಂಪಿ

Rockline venkatesh
Published on

ಬೆಂಗಳೂರು: ಸ್ಯಾಂಡಲ್​​ವುಡ್​ನ ಸ್ಠಾರ್​ ನಿರ್ಮಾಪಕ ಹಾಗೂ ನಟ  ರಾಕ್​ಲೈನ್​ ವೆಂಕಟೇಶ್​ ಅವರ ಒಡೆತನದಲ್ಲಿರುವ  ರಾಕ್​ಲೈನ್​ ಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ತೆರಿಗೆ ಪಾವತಿ ಬಾಕಿ ಹಿನ್ನಲೆಯಲ್ಲಿ ಬೀಗ ಹಾಕಿದ್ದಾರೆ.

ಬೆಂಗಳೂರಿನ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರ ರಾಕ್‌ಲೈನ್ ಮಾಲ್ ಬಾಕಿ ತೆರಿಗೆ ಪಾವತಿಸದ ಕಾರಣ ಇಂದು ಪಾಲಿಕೆ ಕಂದಾಯ ಅಧಿಕಾರಿಗಳು ಈಗ ಮಾಲ್ ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಾಕ್ ಲೈನ್  ಅವರು 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ಈ ವರೆಗೂ ತೆರಿಗೆಯನ್ನು ಪಾವತಿಸಿಲ್ಲ. ಇಂದು ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಲಾಗಿದೆ.

ಸ್ಥಳದಲ್ಲಿ ವಲಯ ಆಯುಕ್ತರಾದ ಶ್ರೀಮತಿ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತರಾದ ಬಾಲಶೇಖರ್ ದಾಸರಹಳ್ಳಿ ವಲಯ ಅಧಿಕಾರಿಗಳು, ಕಂದಯಾ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್ ಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು. ತೆರಿಗೆ ಪಾವತಿ ಬಾಕಿ ಇರುವ ಹಿನ್ನಲೆಯಲ್ಲಿ ರಾಕ್​ಲೈನ್​​ ಮಾಲ್​ಗೆ ಅಧಿಕಾರಿಗಳು ಬೀಗ  ಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net