More

    ರಾಜಧಾನಿಯಲ್ಲಿ ಫ್ಲೆಕ್ಸ್​ ಅಳವಡಿಸಿದರೆ ಕಠಿಣ ಕ್ರಮ: ಸುತ್ತೋಲೆ ಹೊರಡಿಸಿದ ಬಿಬಿಎಂಪಿ

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ಮಧ್ಯೆಯೇ ರಾಜಧಾನಿಯಲ್ಲಿ ಪ್ರಚಾರದ ಬ್ಯಾನರ್ ಮತ್ತು ಫ್ಲೆಕ್ಸ್​ಗಳನ್ನು ಅಳವಡಿಸುವುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ಬಂಧ ಹೇರಿ ಸುತ್ತೋಲೆ ಹೊರಡಿಸಿದ್ದಾರೆ.

    ಬ್ಯಾನರ್ ಅಳವಡಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು. ನಿಯಮ ಉಲ್ಲಂಘನೆಯಾಗದಂತೆ ಆಯಾ ವಲಯದ ನೋಡಲ್ ಅಧಿಕಾರಿಗಳು ನಿಗಾ ಇಡಬೇಕು. ಬ್ಯಾನರ್ ತಯಾರಿಸುವ, ಕಟ್ಟುವವರ ವಿರುದ್ಧ ಕಾರ್ಯಾಚರಣೆ ನಡೆಸಿ ಇಂಥ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕೆಂದು ಸುತ್ತೋಲೆಯಲ್ಲಿ ಮುಖ್ಯ ಆಯುಕ್ತರು ಉಲ್ಲೇಖಿಸಿದ್ದಾರೆ.

    ಇದನ್ನೂ ಓದಿ: ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

    ಬಿಬಿಎಂಪಿ ವ್ಯಾಪ್ತಿಯಲ್ಲಿ ಅಳವಡಿಸಿರುವ ಹೋರ್ಡಿಂಗ್, ಬ್ಯಾನರ್‌ಗಳು ಮತ್ತು ಬಂಟಿಂಗ್ಸ್ ತೆಗೆದು ಹಾಕಲು ಹಾಗೂ ಅಳವಡಿಸದಂತೆ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ಕಾಯ್ದೆಯ ಸೆಕ್ಷನ್ 254ರ ಅಡಿಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದರು.

    ಹೈಕೋರ್ಟ್ ಆದೇಶ

    ಫ್ಲೆಕ್ಸ್, ಬ್ಯಾನರ್ ಅಳವಡಿಸುವುದನ್ನು ನಿಷೇಧಿಸಿ ಎಂದು ಹೈಕೋರ್ಟ್ ಹಿಂದೆ ಆದೇಶ ಹೊರಡಿಸಿತ್ತು. ಬಿಬಿಎಂಪಿ ಕಾಯ್ದೆ 2020, ಬಿಬಿಎಂಪಿ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಉಪ ವಿಧಿಗಳು 2018 ಹಾಗೂ ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ) ತಡೆ ಕಾಯ್ದೆ 1981 ಅನುಸಾರ ಅನಗತ್ಯ ಬ್ಯಾನರ್ ಅಳವಡಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು. ಬಿಬಿಎಂಪಿ ಮಾರ್ಷಲ್ಸ್, ಕಂದಾಯ ಮೌಲ್ಯಮಾಪಕರು, ನಿರೀಕ್ಷಕರು, ಸಹಾಯಕರು, ಕಿರಿಯ ಎಂಜಿನಿಯರ್‌ಗಳಿಗೆ ನಗರದಲ್ಲಿರುವ ಫ್ಲೆಕ್ಸ್ ಅಳವಡಿಸಿರುವುದರ ಕುರಿತು ಸರ್ವೆ ನಡೆಸಿ, ಎಫ್‌ಐಆರ್ ದಾಖಲಿಸಿ, ಫ್ಲೆಕ್ಸ್ ತೆರವುಗೊಳಿಸಲು ವೆಚ್ಚವಾಗುವ ಹಣವನ್ನು ಅವರಿಂದಲೇ ವಸೂಲಿ ಮಾಡಬೇಕೆಂದು ಪಾಲಿಕೆಗೆ ಹೈಕೋರ್ಟ್ ಸೂಚನೆ ನೀಡಿತ್ತು.

    ಪ್ಯಾನ್-ಆಧಾರ್ ಲಿಂಕ್​, ಮಾ. 31 ಕಡೇ ದಿನ: ಸ್ಟೇಟಸ್​ ಚೆಕ್ ಮಾಡಿಕೊಳ್ಳುವುದು ಹೇಗೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts