More

    ಬೆಂಗಳೂರಿನಲ್ಲಿ ನಿಲ್ಲದ ರಸ್ತೆ ಗುಂಡಿ ಗಂಡಾಂತರ! ತಲೆಗೆ ತೀವ್ರ ಪೆಟ್ಟು ಬಿದ್ದು ಕೋಮಾಗೆ ಜಾರಿದ ಬೈಕ್ ಸವಾರ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಗಂಡಾಂತರ ಮುಂದುವರಿದಿದೆ. ದಿನಕ್ಕೊಂದು ಅವಘಡ ಸಂಭವಿಸುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಬಿಬಿಎಂಪಿಗೆ ಬೆಂಗಳೂರಲ್ಲಿ ಇನ್ನೆಷ್ಟು ಬಲಿ ಬೇಕು ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

    ಇದೀಗ ರಸ್ತೆ ಗುಂಡಿಗೆ ಮತ್ತೊಂದು ಅವಘಡ ಸಂಭವಿಸಿದ್ದು, ಬೈಕ್​ ಸವಾರನೊಬ್ಬ ರಸ್ತೆ ಗುಂಡಿಯಿಂದಾಗಿ ಕೆಳಗೆ ಬಿದ್ದು ಕೋಮಾಗೆ ಜಾರಿದ್ದಾರೆ. ಬಿಬಿಎಂಪಿಯ ಘನ ನಿರ್ಲಕ್ಷ್ಯಕ್ಕೆ ಬೈಕ್​​ ಸವಾರ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

    ಜಾಲಹಳ್ಳಿಯ ಗಂಗಮ್ಮ ರಸ್ತೆಯಲ್ಲಿ ಈ ಘಟನೆ ನಡೆದಿದೆ.‘ 37 ವರ್ಷದ ಸಂದೀಪ್, ವಿದ್ಯಾರಣ್ಯಪುರದ ನಿವಾಸಿ. ಮಂಗಳವಾರ ರಾತ್ರಿ 9.30ರ ಸುಮಾರಿಗೆ ಸ್ನೇಹಿತರ ಜೊತೆ ಕ್ರಿಕೆಟ್ ಆಡಿ ಮನೆಗೆ ತೆರಳುತ್ತಿದ್ದರು. ರಸ್ತೆಯಲ್ಲಿದ್ದ ಯಮಸ್ವರೂಪಿ ಗುಂಡಿ ಕಾಣಿಸದೇ ಗುಂಡಿಗೆ ಬಿದ್ದ ಪರಿಣಾಮ ತಲೆಗೆ ತೀವ್ರ ಗಾಯವಾಗಿದೆ. ಕೂಡಲೇ ಅವರನ್ನು ಹೆಚ್.ಎಮ್.ಟಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್.ಎಂ.ಟಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ತಲೆಗೆ ತೀವ್ರವಾಗಿ ಗಾಯವಾಗಿರುವ ಹಿನ್ನೆಲೆಯಲ್ಲಿ ಸಂದೀಪ್‌ಗೆ ಆಪರೇಷನ್ ಮಾಡಲಾಗಿದೆ. ಸದ್ಯ ಸಂದೀಪ್​ ಕೋಮಾದಲ್ಲಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸಂದೀಪ್​ರ ಸ್ಥಿತಿ ನೋಡಿದ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. (ದಿಗ್ವಿಜಯ ನ್ಯೂಸ್​)

    ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

    ಕೊಹ್ಲಿ ಮಾಡಿದ್ದು ನೂರಕ್ಕೆ ನೂರರಷ್ಟು ತಪ್ಪು! ಟೀಮ್​ ಇಂಡಿಯಾ ಮಾಜಿ ಆಟಗಾರನ ಸ್ಫೋಟಕ ಹೇಳಿಕೆ

    ಟ್ವಿಟರ್ ಉದ್ಯೋಗಿಗಳ ವಜಾ ಪ್ರಕ್ರಿಯೆ ಶುರು: ಭಾರತದಲ್ಲೂ ಶೇ. 50 ನೌಕರರಿಗೆ ಗೇಟ್​ಪಾಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts