ಬಿಬಿಎಂಪಿಯಲ್ಲಿ ಖಾಲಿ ಹುದ್ದೆ ಭರ್ತಿ ಮಾಡಿ: ಸರ್ಕಾರಕ್ಕೆ ಪತ್ರ ಬರೆದ ಸಂಘ

ಬೆಂಗಳೂರು: ಬಿಬಿಎಂಪಿಯಲ್ಲಿ ಖಾಲಿ ಉಳಿದಿರುವ ವಿವಿಧ ವೃಂದದ ಒಟ್ಟು 6,414 ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಉಳಿದ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯದ ಹಿನ್ನೆಲೆಯಲ್ಲಿ ಹೆಚ್ಚಿನ ಒತ್ತಡದಲ್ಲಿ ಅಧಿಕಾರಿಗಳು, ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರಿ ಹಂತದಲ್ಲಿ ಸಿಗಬೇಕಿದ್ದ ಮುಂಬಡ್ತಿ ಪಡೆಯಲು ವಿಳಂಬವಾಗಿ ಅಧಿಕಾರಿಗಳು ನಿವೃತ್ತಿ ಹೊಂದುತ್ತಿದ್ದಾರೆ. ಇದರಿಂದಾಗಿ ನ್ಯಾಯಯುತವಾಗಿ ದೊರಯಬೇಕಿದ್ದ ಆಡಳಿತ ಸೌಲಭ್ಯಗಳಿಂದ ಸಾಕಷ್ಟು ಅಧಿಕಾರಿಗಳು … Continue reading ಬಿಬಿಎಂಪಿಯಲ್ಲಿ ಖಾಲಿ ಹುದ್ದೆ ಭರ್ತಿ ಮಾಡಿ: ಸರ್ಕಾರಕ್ಕೆ ಪತ್ರ ಬರೆದ ಸಂಘ