More

    ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಶೀಘ್ರ ಅಧಿಸೂಚನೆ

    ಬೆಂಗಳೂರು: ರಾಜ್ಯ ಸರ್ಕಾರ ಇದೀಗ 2500 ಪ್ರೌಢಶಾಲಾ ಶಿಕ್ಷಕರನ್ನು ನೇಮಕ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್, ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಇನ್ನು ವಿವಿಧ ವಿಷಯಗಳ ಬಗ್ಗೆಯೂ ಸಚಿವರು ಹೇಳಿಕೆ ನೀಡಿದ್ದು, ಎನ್ಇಪಿ, ಹೈಕೋರ್ಟಿನಲ್ಲಿ ಇರುವ 15000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯ ಬಗ್ಗೆಯೂ ಬೆಳಕು ಚೆಲ್ಲಿದರು.

    ‘ಇನ್ನು, ಹೊಸ ಕಾಯ್ದೆ ಅನ್ವಯ ಪರಿಶಿಷ್ಟ ಜಾತಿ–ಪಂಗಡಕ್ಕೆ ನಿಗದಿಪಡಿಸಲಾಗಿರುವ ಮೀಸಲಾತಿಯನ್ನು ಆಧಾರವಾಗಿಟ್ಟುಕೊಂಡು ಶಿಕ್ಷಕರ ನೇಮಕಾತಿ ನಡೆಯಲಿದೆ. ಇದರಲ್ಲಿ ಒಟ್ಟು 250 ಮಂದಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಇನ್ನೂ ಜಾರಿಯಾಗಿಲ್ಲ. ರಾಜ್ಯದ 300ರಿಂದ 400 ಆಯ್ದ ಶಾಲೆಗಳಲ್ಲಿ ಜನವರಿ 26ರಿಂದ ಎನ್ಇಪಿ ಜಾರಿಗೊಳಿಸಲು ಯೋಜನೆ ರೂಪಿಸಿದ್ದೇವೆ. ಅದಕ್ಕೆ ಅಗತ್ಯವಿರುವ ಪಠ್ಯಕ್ರಮ ಕೂಡ ರೂಪುಗೊಂಡಿದೆ. ಎನ್‌ಇಪಿ ಪದ್ಧತಿ ಪಠ್ಯ ಆಧಾರಿತ ಅಲ್ಲ. ಚಟುವಟಿಕೆ ಆಧಾರಿತ ಶಿಕ್ಷಣ. ಅಲ್ಲಿ ಬಹಳ ಪುಸ್ತಕಗಳು ಇರುತ್ತವೆ ಎಂದೇನೂ ನನಗೆ ಅನ್ನಿಸಿಲ್ಲ. ಪಠ್ಯಕ್ರಮಕ್ಕೆ ತಕ್ಕಂತೆ ಶಿಕ್ಷಕರಿಗೆ ತರಬೇತಿ ನೀಡಿ ಅವರನ್ನು ಸಜ್ಜುಗೊಳಿಸಲಾಗುವುದು’ ಎಂದು ಹೇಳಿದರು.

    ‘15 ಸಾವಿರ ಶಿಕ್ಷಕರ ನೇಮಕಾತಿ ಮಾಡುವ ಪ್ರಕ್ರಿಯೆಯ ವಿಚಾರ ಹೈಕೋರ್ಟ್‌ನಲ್ಲಿದೆ. ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟು ಷರತ್ತಿನ ಮೇರೆಗೆ ನೇಮಕಾತಿ ಆದೇಶ ನೀಡಿ ಎಂಬುದು ಆಯ್ಕೆಯಾದ ಅಭ್ಯರ್ಥಿಗಳ ಅಳಲು. ಅದು ಕೂಡ ಗಮನದಲ್ಲಿದೆ. ಜನವರಿ 18ಕ್ಕೆ ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅಲ್ಲಿನ ಪ್ರಕ್ರಿಯೆ ನೋಡಿಕೊಂಡು ಮುಂದಿನ ತೀರ್ಮಾನ ಮಾಡಲಾಗುವುದು’ ಎಂದು ಬಿ.ಸಿ ನಾಗೇಶ್ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts