More

    ಟಿ-20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ಕೆ.ಎಲ್. ರಾಹುಲ್​, ಶ್ರೇಯಸ್​ ಅಯ್ಯರ್​ಗೆ ಕೊಕ್

    ನವದೆಹಲಿ: ಜೂನ್​ 01ರಿಂದ ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ.

    15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ರೋಹಿತ್​ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ಹಾರ್ದಿಕ್​ ಪಾಂಡ್ಯರನ್ನು ನೇಮಿಸಲಾಗಿದ್ದು, ಸಂಜು ಸ್ಯಾಮ್ಸನ್​ ಹಾಗೂ ರಿಷಭ್​ ಪಂತ್​ರನ್ನು ಆಯ್ಕೆ ಮಾಡಲಾಗಿದೆ. ಅಚ್ಚರಿ ಎಂಬಂತೆ ಕೆ.ಎಲ್​. ರಾಹುಲ್, ಇಶಾನ್​ ಕಿಶನ್​ ಹಾಗೂ ಶ್ರೇಯಸ್​ ಅಯ್ಯರ್​ಗೆ ಕೊಕ್​ ಕೊಡಲಾಗಿದೆ.

    ಇದನ್ನೂ ಓದಿ: ಭಾರತ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ ಆದರೆ ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕ್​ ನಾಯಕನ ಹೇಳಿಕೆ ವೈರಲ್​

    ಜೂನ್​ 01ರಿಂದ ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ಗೆ ಭಾರತ ತಂಡ ಪ್ರಕಟಗೊಂಡಿದ್ದು,  ಟೀಮ್​ ಇಂಡಿಯಾ ತನ್ನ ಆಭಿಯಾನವನ್ನು ಜೂನ್​ 05ರಂದು ಐರ್ಲೆಂಡ್​ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ.

    ಟಿ-20 ವಿಶ್ವಕಪ್​ಗೆ ಭಾರತ ತಂಡ

    ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್​​ದೀಪ್ ಯಾದವ್, ಯಜುವೇಂದ್ರ ಚಹಾಲ್, ಅರ್ಷ್​ದೀಪ್​ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ. ಅದರಂತೆ ಶುಭ್​ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಹಾಗೂ ಆವೇಶ್ ಖಾನ್​ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts