More

    ಲೋಕಸಭೆ ಚುನಾವಣೆಯಿಂದಾಗಿ ಐಪಿಎಲ್​ 2ನೇ ಚರಣ ಯುಎಇಗೆ ಸ್ಥಳಾಂತರ; ಜಯ್​ ಷಾ ಕೊಟ್ಟ ಸ್ಪಷ್ಟನೆ ಹೀಗಿದೆ

    ನವದೆಹಲಿ: 17ನೇ ಆವೃತ್ತಿಯ ಐಪಿಎಲ್​ಗೆ ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ 2ನೇ ಚರಣದ ಪಂದ್ಯಗಳು ಅರಬ್ಬರ ನಾಡು ಯುಎಇಗೆ ಸ್ಥಳಾಂತರಗೊಳ್ಳಲಿದೆ ಎಂದು ಹೇಳಲಾಗಿದೆ. ಕಳೆದ ಕೆಲ ದಿನಗಳಿಂದ ಹರಡಿದ್ದ ಗಾಳಿ ಸುದ್ದಿಗೆ ಅಂತಿಮವಾಗಿ ಬ್ರೇಕ್​ ಬಿದ್ದಿದ್ದು, ಬಿಸಿಸಿಐ ಕಾರ್ಯದರ್ಶಿ ಇಜಯ್​ ಷಾ ಇದಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ.

    ಶನಿವಾರ ಕೇಂದ್ರ ಚುನಾವಣಾ ಆಯೋಗ ಲೋಕಸಭೆಗೆ ಎಲೆಕ್ಷನ್​ಗೆ ದಿನಾಂಕ ಪ್ರಕಟಿಸುತ್ತಿದ್ದಂತೆ ಪ್ರತಿಕ್ರಿಯಿಸಿದ ಜಯ್​ ಷಾ, ಈ ಬಾರಿಯ ಐಪಿಎಲ್‌ ಅನ್ನು ವಿದೇಶಕ್ಕೆ ಸ್ಥಳಾಂತರಿಸಲಾಗುವುದಿಲ್ಲ. 2024 ರ ಸಂಪೂರ್ಣ ಆವೃತ್ತಿಯು ಭಾರತದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

    ವಾಸ್ತವವಾಗಿ ಚುನಾವಣಾ ಆಯೋಗ ಪ್ರಕಟಿಸಿದ ಲೋಕಸಭಾ ಎಲೆಕ್ಷನ್​ಗೆ ವೇಳಾಪಟ್ಟಿಯನ್ನು ಗಮನಿಸಿದ ನಂತರ ಮೊದಲಾರ್ಧದ ಐಪಿಎಲ್ ಮುಗಿದ ಬಳಿಕ ಉಳಿದಾರ್ಧದ ಐಪಿಎಲ್ ಅನ್ನು ಯುಎಇಯಲ್ಲಿ ಆಯೋಜಿಸಲು ಬಿಸಿಸಿಐ ಚಿಂತಿಸುತ್ತದೆ ಎಂದು ವರದಿಯಾಗಿತ್ತು. ಹೀಗಾಗಿ ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಯನ್ನು ಕಣ್ತುಂಬಿಕೊಳ್ಳುವುದನ್ನು ಮಿಸ್ ಮಾಡಿಕೊಳ್ಳುವ ಆತಂಕದಲ್ಲಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ಸಿಕ್ಕಂತ್ತಾಗಿದೆ.

    ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಜನ್ಮದಿನ; ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ ಎಂದ ಅಪ್ಪು ಫ್ಯಾನ್ಸ್​

    ಈ ಹಿಂದೆ ಬಿಸಿಸಿಐ 2009 (ದಕ್ಷಿಣ ಆಫ್ರಿಕಾ) ಮತ್ತು 2014 (ಯುಎಇ) ಲೋಕಸಭೆ ಚುನಾವಣೆಗಳ ಸಂದರ್ಭದಲ್ಲಿ ಮತ್ತು ಕೋವಿಡ್ ಕಾರಣದಿಂದ 2020 ಮತ್ತು 2021 ರ ಐಪಿಎಲ್ ಪಂದ್ಯಾವಳಿಯನ್ನು ವಿದೇಶದಲ್ಲಿ ನಡೆಸಿತ್ತು. 2019ರಲ್ಲಿ ಸಂಪೂರ್ಣ ಟೂರ್ನಿಯನ್ನು ಭಾರತದಲ್ಲಿ ಆಯೋಜನೆ ಮಾಡಿತ್ತು.

    17ನೇ ಆವೃತ್ತಿಯ ಐಪಿಎಲ್ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಲೀಗ್‌ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಹಾಲಿ ಚಾಂಪಿಯನ್ ಚೆನ್ನೈ ಹಾಗೂ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ಮುಖಾಮುಖಿಯಾಗಲಿದ್ದು, ಕ್ರೀಡಾಭಿಮಾನಿಗಳು ಈ ಪಂದ್ಯ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts