More

    ACC ಅಧ್ಯಕ್ಷರಾಗಿ 3ನೇ ಬಾರಿಗೆ ಮರುನೇಮಕಗೊಂಡ ಜಯ್​ ಷಾ

    ನವದೆಹಲಿ: ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್ ಷಾ ಮೂರನೇ ಬಾರಿಗೆ ಏಷ್ಯನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ (ACC) ಆಯ್ಕೆಯಾಗಿದ್ದಾರೆ.

    ಬಾಲಿಯಲ್ಲಿ ನಡೆದ ACC ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. ಲಂಕಾ ಕ್ರಿಕೆಟ್ (SLC) ಅಧ್ಯಕ್ಷ ಶಮ್ಮಿ ಸಿಲ್ವಾ ಅವರು ಎರಡನೇ ಬಾರಿಗೆ ಜಯ್ ಷಾ ಅವರ ಅಧಿಕಾರಾವಧಿಯ ವಿಸ್ತರಣೆಯನ್ನು ಪ್ರಸ್ತಾಪಿಸಿದ್ದಾರೆ. ನಾಮನಿರ್ದೇಶನವನ್ನು ACCಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಬೆಂಬಲಿಸಿದ್ದಾರೆ.

    ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಮತದಾರರು ಕಾಂಗ್ರೆಸ್ ಜೊತೆ ಹೋಗಬಾರದು: ಪ್ರಕಾಶ್​ ಅಂಬೇಡ್ಕರ್

    ಈ ನಾಮನಿರ್ದೇಶನವನ್ನು ಎಸಿಸಿಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಬೆಂಬಲಿಸಿದ್ದಾರೆ. ಇದರೊಂದಿಗೆ ಜಯ್ ಷಾ ಮೂರನೇ ಬಾರಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಆಯ್ಕೆಯಾದಂತಾಗಿದೆ. ಜನವರಿ 2021 ರಲ್ಲಿ ಜಯ್ ಷಾ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾದ ನಜ್ಮುಲ್ ಹಸನ್ ಅವರಿಂದ ಎಸಿಸಿಯ ಆಡಳಿತವನ್ನು ವಹಿಸಿಕೊಂಡಿದ್ದರು. ಇದಾದ ಬಳಿಕ ಅವರನ್ನು 2 ಬಾರಿ ಮರು ನೇಮಕ ಮಾಡಲಾಗಿದೆ.

    ಸಂದಿಗ್ದ ಪರಿಸ್ಥಿತಿಯಲ್ಲೂ ಜಯ್​ ಷಾ ಅವರ ಮುಂದಾಳತ್ವದಲ್ಲಿ ಎಸಿಸಿ ಯಶಸ್ವಿಯಾಗಿ ಕ್ರಿಕೆಟ್​ ಟೂರ್ನಿಗಳನ್ನು ಆಯೋಜಿಸಿದ್ದಾರೆ. ಏಷ್ಯಾದಾದ್ಯಂತ ಕ್ರಿಕೆಟ್ ಅನ್ನು ಉತ್ತೇಜಿಸುವಲ್ಲಿ ಮತ್ತು ಅಭಿವೃದ್ಧಿಪಡಿಸುವಲ್ಲಿ ಮತ್ತು ಗಮನಾರ್ಹ ಪ್ರಗತಿಯತ್ತ ಮುನ್ನಡೆಸುವಲ್ಲಿ ಜಯ್ ಶಾ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಅಧ್ಯಕ್ಷ ಹುದ್ದೆಯಲ್ಲಿ ಅವರೇ ಮುಂದುವರೆಯಬೇಕೆಂಬುದು ನಮ್ಮೆಲ್ಲರ ಆಶಯವಾಗಿತ್ತು. ಅದರಂತೆ ಇದೀಗ ಸರ್ವಾನುಮತದಿಂದ ಅವರನ್ನು ಮೂರನೇ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಮ್ಮಿ ಸಿಲ್ವಾ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts