ಸಿಜೆಐ ಮೇಳೆ ಶೂ ಎಸೆಯುವ ಯತ್ನ: ಆರೋಪಿ ವಕೀಲನನ್ನು ಬಾರ್​ ಕೌನ್ಸಿಲ್​ನಿಂದ ಅಮಾನತುಗೊಳಿಸಿದ ಬಿಸಿಐ| CJI

Untitled design - 2025-10-06T193913.328
Published on

CJI: ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯುವಾಗ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ಇಂದು (ಅ. 06) ಬೆಳಗ್ಗೆ ನಡೆದಿದೆ. ಕೃತ್ಯ ಎಸಗಿದ ಆರೋಪಿ ವಕೀಲ ರಾಕೇಶ್ ಕಿಶೋರ್​ನನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಶಾಶ್ವತವಾಗಿ ಕೋರ್ಟ್​ನಲ್ಲಿ ಪ್ರಾಕ್ಟೀಸ್ ಮಾಡದಂತೆ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಈ ಕುರಿತು ಮಧ್ಯಂತರ ಅಮಾನತು ಆದೇಶ ಹೊರಡಿಸಿರುವ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಹಿರಿಯು ವಕೀಲ ಮನನ್ ಕುಮಾರ್ ಮಿಶ್ರಾ, ವಕೀಲರ ನಡವಳಿಕೆಯು "ಪ್ರಾಥಮಿಕವಾಗಿ ನ್ಯಾಯಾಲಯದ ಘನತೆಗೆ ಹೊಂದಿಕೆಯಾಗುವುದಿಲ್ಲ ಮತ್ತು 1961ರ ವಕೀಲರ ಕಾಯ್ದೆ ಅಡಿಯಲ್ಲಿ ವೃತ್ತಿಪರ ನೀತಿಶಾಸ್ತ್ರವನ್ನು ಉಲ್ಲಂಘಿಸುತ್ತದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಕೇಶ್​ ಕಿಶೋರ್ ಅವರನ್ನು ಅಭ್ಯಾಸದಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಭಾರತದ ಯಾವುದೇ ನ್ಯಾಯಾಲಯ, ನ್ಯಾಯಮಂಡಳಿ ಅಥವಾ ಪ್ರಾಧಿಕಾರದಲ್ಲಿ ಹಾಜರಾಗುವುದು, ಕಾರ್ಯನಿರ್ವಹಿಸುವುದು, ವಾದಿಸುವುದು ಅಥವಾ ಅಭ್ಯಾಸ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ದೇಶದ ಎಲ್ಲಾ ನ್ಯಾಯಾಲಯಗಳಲ್ಲಿ ಈ ಆದೇಶವನ್ನು ಅನುಸರಿಸುವಂತೆ ಸೂಚಿಸಲಾಗಿದೆ.

ಹಾಗೆಯೇ ಆರೋಪಿ ವಕೀಲನಿಗೆ ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ತೆಗೆದುಕೊಳ್ಳಬಾರದು ಎಂಬುದನ್ನು 15 ದಿನಗಳಲ್ಲಿ ವಿವರಿಸುವಂತೆ ಕೇಳುವ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಕೌನ್ಸಿಲ್ ತಿಳಿಸಿದೆ.  (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net