ವಿಜಯವಾಣಿ ಸುದ್ದಿಜಾಲ ಧಾರವಾಡ
ಉತ್ತಮ ಯೋಚನೆ, ಉತ್ತಮ ಯೋಜನೆ ನಮ್ಮನ್ನು ಯಶಸ್ವಿಗೊಳಿಸುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಾಗಲು ಉಪನ್ಯಾಸಕರು ಕಾಲಕ್ಕೆ ತಕ್ಕಂತೆ ತಮ್ಮನ್ನು ತಾವು ಶೈಕ್ಷಣಿಕ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಉಪ ನಿರ್ದೇಶಕ ಕೆ.ಪಿ. ಸುರೇಶ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಮತ್ತು ಪೂರ್ಣಾ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ವ್ಯವಹಾರ ಅಧ್ಯಯನ ಮತ್ತು ಇಂಗ್ಲಿಷ್ ಭಾಷಾ ಉಪನ್ಯಾಸಕರಿಗೆ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ವಿಷಯಾಧಾರಿತ ಪುನಃಶ್ಚೇತನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಡಾ. ಚಿನ್ನಪ್ಪ ಹಾದಿಮನಿ ಮಾತನಾಡಿ, ಇಲಾಖೆ ಅಧೀನದಲ್ಲಿ ನಡೆಯುವ ಇಂತಹ ಉತ್ತಮ ತರಬೇತಿ ಕಾರ್ಯಾಗಾರಕ್ಕೆ ನಮ್ಮ ಬೆಂಬಲವಿದೆ. ಇಂತಹ ಸೃಜನಶೀಲತೆಯುಳ್ಳ ಸಂಪನ್ಮೂಲ ವ್ಯಕ್ತಿಗಳಿಂದ ಶೈಕ್ಷಣಿಕ ಅಭಿವೃದ್ಧಿಯಾಗಲಿ ಎಂದರು.
ತೇಜಸ್ವಿನಿ ನಾರಾಯಣಕರ, ಹನುಮಂತಪ್ಪ ಡಿ, ಪೂರ್ಣಾ ಶಿಕ್ಷಣ ಸಂಸ್ಥೆ ನಿರ್ದೇಶಕ ಮಹೇಶ ಕೋಲ್ಹಾರ, ಸಂದೀಪ ಬೂದಿಹಾಳ, ಸಿ.ಎನ್. ಪೂಜಾರ, ಸಂಜೀವ, ಇತರರು ಇದ್ದರು.
ಶೈಕ್ಷಣಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ

You Might Also Like
ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon
watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…
ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips
ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…
ಅಳದಿದ್ದರು ಕಣ್ಣೀರು ಬರುತ್ತಿದೆಯೇ; ತಜ್ಞರು ಸೂಚಿಸಿರುವ ಸಿಂಪಲ್ ಪರಿಹಾರ ಹೀಗಿದೆ.. Health Tips
ಸೌಂದರ್ಯವನ್ನು ಅಳೆಯಲು ಕಣ್ಣುಗಳು ಒಂದು ಪ್ರಮುಖ ಮಾನದಂಡವಾಗಿದೆ. ಇದು ಪ್ರಮುಖ ಇಂದ್ರಿಯಗಳಲ್ಲಿ ಒಂದಾಗಿದೆ. ಅದಿಲ್ಲದೆ ಜೀವನವನ್ನು…