ಸುಬ್ರಹ್ಮಣ್ಯ: ವಿದ್ಯಾರ್ಥಿಗಳು ಪೋಕ್ಸೋ ಕಾಯ್ದೆ ಬಗ್ಗೆ ಪೂರ್ಣ ಜ್ಞಾನ ಹೊಂದಿರಬೇಕು. ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ಅತ್ಯವಶ್ಯಕ ರಕ್ಷಣೆಯನ್ನು ಕಾಯ್ದೆ ನೀಡಿದೆ ಎಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಸಂಧ್ಯಾಮಣಿ ಹೇಳಿದರು.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿದ ಎಸ್‌ಎಸ್ ಪಿಯು ಕಾಲೇಜಿನಲ್ಲಿ, ಸೋಮವಾರ ಪೋಕ್ಸೋ ಕಾಯ್ದೆ ಬಗೆಗಿನ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಪ್ರಾಚಾರ್ಯ ಸೋಮಶೇಖರ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಸೌಮ್ಯಾ ದಿನೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು.