22.8 C
Bengaluru
Saturday, January 18, 2020

ರೋಗಗ್ರಸ್ಥ ಚಳಿಗಾಲ! ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ…

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಚಳಿಗಾಲ ಆರಂಭದೊಂದಿಗೆ ಶೀತ ಸಂಬಂಧಿ ರೋಗಗಳು ಜನರನ್ನು ಬಾಧಿಸುತ್ತಿದ್ದು, ಕಳೆದೊಂದು ವಾರದಿಂದ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಏರಿಕೆಯಾಗುತ್ತಿದೆ.

ಬೆಂಗಳೂರಿನ ನಗರದಲ್ಲೇ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಶೇ. 25ರಿಂದ 30 ಹೆಚ್ಚಳವಾಗಿದ್ದು, ಶೀತ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ಪಡೆಯುವವರ ಸಂಖ್ಯೆ ಏರಿಕೆಯಾಗಿದೆ.

ವೈರಾಣು ಸೋಂಕು: ಬೆಳಗ್ಗೆ, ಸಂಜೆ ಅತಿಯಾದ ಚಳಿ. ಮಧ್ಯಾಹ್ನ ಸುಡು ಬಿಸಿಲು. ಇದರಿಂದ ವಾತಾವರಣವು ಅತಿಯಾದ ಆರ್ದ್ರತೆ ಹಾಗೂ ಧೂಳಿನಿಂದ ಕೂಡಿರುತ್ತದೆ. ಇದರಿಂದ ಶೀತ ಹಾಗೂ ಜ್ವರ ಅಷ್ಟೇ ಅಲ್ಲ ವೈರಾಣು ಸೋಂಕಿನಿಂದ ಮಕ್ಕಳಲ್ಲಿ ವಾಂತಿ ಭೇದಿ ಪ್ರಕರಣಗಳು ಸಹ ಹೆಚ್ಚಿವೆ ಎನ್ನುತ್ತಾರೆ ಕೆ.ಸಿ.ಜನರಲ್ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಲಕ್ಷ್ಮೀಪತಿ.

ಮನೆಮಂದಿಗೆಲ್ಲ ಹರಡುತ್ತದೆ: ಚಳಿಗಾಲದಲ್ಲಿ ವೈರಾಣು ಹೆಚ್ಚುವುದಲ್ಲದೆ, ಗಾಳಿಯಲ್ಲಿ ವೇಗವಾಗಿ ಹರಡುತ್ತದೆ. ಇದರಿಂದ ಒಬ್ಬರಿಗೆ ಶೀತ ಕಾಣಿಸಿಕೊಂಡರೆ ಮನೆ ಮಂದಿಯನ್ನೆಲ್ಲ ಕಾಡುತ್ತದೆ. ತಣ್ಣನೆ ವಾತಾವರಣದಿಂದ ಮನುಷ್ಯನ ದೇಹದಲ್ಲಿ ರೋಗನಿರೋಧಕ ಶಕ್ತಿ ಕುಗ್ಗುವುದರಿಂದ ಶೀತ ಹಾಗೂ ಜ್ವರ ಬೇಗನೇ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಇದು ಶಾಲಾ ಮಕ್ಕಳಲ್ಲಿ ಹೆಚ್ಚು. ನಿತ್ಯ ಆಸ್ಪತ್ರೆಗೆ ಬರುವ ಮಕ್ಕಳಲ್ಲಿ ಶೇ. 80 ಮಕ್ಕಳು ಶೀತ ಸಮಸ್ಯೆ ಹೊಂದಿದವರಾಗಿದ್ದಾರೆ. ಹೀಗಾಗಿ ಎಚ್ಚರಿಕೆ ವಹಿಸುವ ಅಗತ್ಯವಿದೆ ಎನ್ನುತ್ತಾರೆ ಬಿ.ಆರ್.ಲೈಫ್ ಎಸ್​ಎಸ್​ಎನ್​ಎಂಸಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ರವಿಶಂಕರ್ ಮಾರ್ಪಲ್ಲಿ.

ವೈದ್ಯರ ಸಲಹೆ ಏನು?
  1. ಮಕ್ಕಳು, ವೃದ್ಧರನ್ನು ಬೆಚ್ಚಗೆ ಇರಿಸಬೇಕು.
  2. ಮನೆಯಲ್ಲೇ ತಯಾರಿಸಿದ ತಾಜಾ ಹಾಗೂ ಬಿಸಿ ಆಹಾರ ಸೇವಿಸಬೇಕು.
  3. ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು.
  4. ಕರಿದ ಹಾಗೂ ಮಸಾಲೆ ಪದಾರ್ಥಗಳ ಮಿತ ಬಳಕೆ ಮಾಡಿ.
  5. ಚಳಿ ಎಂದು ನೀರು ಕುಡಿಯುವುದನ್ನು ಮರೆಯುವಂತಿಲ್ಲ.
  6. ತಾಜಾ ಹಣ್ಣಿನ ರಸ ಸೇವಿಸಬೇಕು.
  7. ತ್ವಚೆಯ ಆರೈಕೆಗಾಗಿ ಕೋಲ್ಡ್ ಕ್ರೀಮ್ ಲೋಷನ್​ಗಳನ್ನು ಬಳಸಿ.
  8. ತಲೆಗೂದಲ ಆರೈಕೆ ಬಗ್ಗೆ ಕಾಳಜಿ ಇರಲಿ.
  9. ಜನದಟ್ಟಣೆ ಸ್ಥಳ ಹಾಗೂ ಜಾತ್ರೆಗಳಿಂದ ದೂರ ಇರುವುದು ಒಳಿತು.
  10. ತಿಳಿ ಬಣ್ಣದ ಉಣ್ಣೆ, ಹತ್ತಿ ಬಟ್ಟೆ ಧರಿಸಿ.
ಕಾಳಜಿ ಅತೀ ಮುಖ್ಯ

ಆಟೊಪಿಕ್ ಡರ್ವಟೈಟಿಸ್ ಕಾಯಿಲೆ ಹೆಚ್ಚು ಬಾಧಿಸುತ್ತದೆ. ಸೋರಿಯಾಸಿಸ್, ಬ್ರಾಂಕ್ರೖೆಟಿಸ್, ಸೈನೋಸೈಟಿಸ್ ಹಾಗೂ ಸಿಕ್ ಬಿಲ್ಡಿಂಗ್ ಸಿಂಡ್ರೋಮ್ (ತಲೆ, ಮೈ-ಕೈ ನೋವು, ಶೀತ, ಕೆಮ್ಮು, ಗಂಟಲು ಬೇನೆ) ನಂತಹ ಸಮಸ್ಯೆಗಳು ಕಾಡುವುದು ಸಾಮಾನ್ಯವಾಗಿದ್ದು ಕಾಳಜಿ ವಹಿಸುವ ಅಗತ್ಯವಿದೆ ಎನ್ನುತ್ತಾರೆ ವೈದ್ಯರು.

ಚರ್ಮದ ಸಮಸ್ಯೆಯೂ ಕಾಡಲಿದೆ

ಚಳಿಗಾಲದಲ್ಲಿ ಶೀತ ಬಾಧೆಯೊಂದಿಗೆ ಚರ್ಮದ ಸಮಸ್ಯೆಯೂ ಕಾಡಲಿದೆ. ಒಣ ಹಾಗೂ ಸೂಕ್ಷ್ಮ ಚರ್ಮದವರು ಈ ಋತುಮಾನದಲ್ಲಿ ಹೆಚ್ಚು ಜಾಗೃತಿ ವಹಿಸುವ ಅಗತ್ಯವಿದೆ. ಇಸುಬು, ಹುಳುಕಡ್ಡಿ, ತುರಿಕೆ, ತಲೆ ಹೊಟ್ಟು, ತುಟಿ ಹಾಗೂ ಹಿಮ್ಮಡಿ ಹೊಡೆತ, ಚರ್ಮ ಬಿರಿದು ಕಾಂತಿಹೀನವಾಗುತ್ತದೆ. ಬಿಸಿಲಿಗೆ ಮೈ ಸೋಕಿದರೆ ಚರ್ಮಕ್ಕೆ ಚುಚ್ಚಿದಂತಹ ಅನುಭವವಾಗುತ್ತದೆ. ಹೀಗಾಗಿ ವೈದ್ಯರ ಸಲಹೆ ಪಡೆದು ತಮ್ಮ ಚರ್ಮಕ್ಕೆ ಹೊಂದಿಕೆಯಾಗುವಂತಹ ಲೋಷನ್​ಗಳನ್ನು ಬಳಕೆ ಮಾಡುವುದು ಸೂಕ್ತ ಎನ್ನುತ್ತಾರೆ ಇಎಸ್​ಐ ಆಸ್ಪತ್ರೆ ಚರ್ಮರೋಗ ತಜ್ಞ ಡಾ. ಗಿರೀಶ್.

| ಪಂಕಜ ಕೆ.ಎಂ. ಬೆಂಗಳೂರು

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...