More

    ನಿಯಮ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಿ

    ಮಂಡ್ಯ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿರುವುದು ಕಂಡುಬಂದಲ್ಲಿ ಸಾರ್ವಜನಿಕರು ಚುನವಣಾಧಿಕಾರಿ ಅಥವಾ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಚುನಾವಣಾಧಿಕಾರಿ ನಹೀದಾ ಜಮ್ ಜಮ್ ತಿಳಿಸಿದರು.


    ಮಳವಳ್ಳಿ ಪಟ್ಟಣದ ತಾಲೂಕು ಕಚೇರಿಯಲ್ಲಿ ತೆರೆಯಲಾಗಿರುವ ಸಹಾಯಕ ಚುನಾವಣಾಧಿಕಾರಿ ಕಾರ್ಯಾಲಯದಲ್ಲಿ ಸೋಮವಾರ ಲೋಕಸಭೆ ಚುನಾವಣೆ ಪೂರ್ವಸಿದ್ಧತೆ ಹಾಗೂ ಚುನಾವಣಾ ನೀತಿ ಸಂಹಿತೆ ಬಗ್ಗೆ ಮಾತನಾಡಿ, ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 2,91,489 ಜನ ಸಂಖ್ಯೆಯಿದ್ದು, 2,52,158 ಮತದಾರರು ಇದ್ದಾರೆ. ಈ ಪೈಕಿ 1,25,470 ಪುರುಷ ಮತ್ತು 1,26,665 ಮಹಿಳೆ ಮತದಾರರಿದ್ದಾರೆ. 23 ತೃತೀಯಲಿಂಗಿ ಮತದಾರರಿದ್ದಾರೆ.

    ಚುನಾವಣಾ ಅಧಿಸೂಚನೆ ಮಾ.28ರಿಂದ ಪ್ರಾರಂಭವಾಗಿ ಏ.4 ರಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆಗೊಳ್ಳಲಿದೆ. ಏ.26 ರಂದು ಮತದಾನ ನಡೆಯಲಿದೆ ಎಂದರು.


    ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮ ತಡೆಗಟ್ಟಲು ಆಯಕಟ್ಟಿನ ಐದು ಸ್ಥಳಗಳಲ್ಲಿ ಚೆಕ್‌ಪೋಸ್ಟ್ ತೆರೆದು ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಒಟ್ಟು 272 ಮತಗಟ್ಟೆಗಳಿದ್ದು, ಈ ಪೈಕಿ 30 ಪಟ್ಟಣ, 242 ಗ್ರಾಮೀಣ ಪ್ರದೇಶಗಳಲ್ಲಿ ಮತಗಟ್ಟೆಗಳ ತೆರೆಯಲಾಗಿದೆ. ಚುನಾವಣಾ ಪ್ರಕ್ರಿಯೆಗೆ 437 ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.


    ಚುನಾವಣಾ ಅಕ್ರಮಗಳನ್ನು ತಡೆಯಲು ತಾಲೂಕು ಕಚೇರಿಯಲ್ಲಿ ಚುನಾವಣಾ ಕಂಟ್ರೋಲ್ ರೂಂ ತೆರೆದು 24/7 ನಮ್ಮ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಅಕ್ರಮ ಚಟುವಟಿಕೆಗಳು ಕಂಡುಬಂದ ಕೂಡಲೇ ಸಾರ್ವಜನಿಕರು ಸಹಾಯವಾಣಿ 08231-242277ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದರು. ಅಲ್ಲದೇ, ಭಾರತ ಚುನಾವಣಾ ಆಯೋಗದ ತಂತ್ರಾಂಶವಾದ ಸಿ-ವಿಐಜಿಐಎಲ್ ಮೂಲಕ ದೂರುಗಳನ್ನು ಸಹ ಸಾರ್ವಜನಿಕರು ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ್ ಲೋಕೇಶ್, ಇನ್‌ಸ್ಪೆಕ್ಟರ್ ರವಿಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts