More

    ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರ ವಹಿಸಿ

    ಕೆ.ಆರ್.ನಗರ: ಜನ, ಜಾನುವಾರುಗಳಿಗೆ ಬೇಸಿಗೆ ಸಂದರ್ಭದಲ್ಲಿ ವಿದ್ಯುತ್, ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸುವ ಜತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕರೆಯಲಾಗಿದ್ದ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ಪಿಡಿಒಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುತ್, ಮೂಲ ಸೌಕರ್ಯಗಳ ಬಗ್ಗೆ ಮಾಹಿತಿ ಹೊಂದಿರಬೇಕು. ಕೆರೆಕಟ್ಟೆ, ನದಿಗಳಿಂದ ಅಕ್ರಮವಾಗಿ ಮೋಟಾರ್ ಮೂಲಕ ನೀರಿನ ಸಂಪರ್ಕ ಹೊಂದಿರುವವರ ವಿರುದ್ಧ ಕ್ರಮವಹಿಸಬೇಕು ಎಂದು ಹೇಳಿದರು.

    ಖಾಸಗಿ ನೀರಿನ ಮೂಲಗಳನ್ನು ಮುಂಜಾಗ್ರತೆಯಾಗಿ ನೋಂದಾಯಿಸಿಕೊಳ್ಳಬೇಕು. ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಸಂಬಂಧಪಟ್ಟವರು ಎಚ್ಚರ ವಹಿಸಬೇಕು ಎಂದರು.

    ತಾಪಂ ಇಒ ಜಿ.ಕೆ.ಹರೀಶ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ರಾಜರಾಮ್ ವೈಲಾಯ, ಸಾಲಿಗ್ರಾಮ ತಹಸೀಲ್ದಾರ್ ನರಗುಂದ, ಟಿಎಚ್‌ಒ ಡಿ.ನಟರಾಜ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts