More

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

    ಶ್ರೀರಂಗಪಟ್ಟಣ: ಪಟ್ಟಣ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಸೂಚನೆ ನೀಡಿದರು.

    ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪುರಸಭಾ ಮುಖ್ಯಾಧಿಕಾರಿ ರಾಜಣ್ಣ, ತಾಲೂಕು ಪಂಚಾಯಿತಿ ಇಒ ವೇಣು ಅವರ ನೇತೃತ್ವದಲ್ಲಿ ಪಿಡಿಒ, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದರು.

    ತಾಲೂಕಿನಲ್ಲಿ ನೀರಿನ ಅಭಾವ ಕಂಡು ಬರುವ ಗ್ರಾಮಗಳನ್ನು ಗುರುತಿಸಿ ಈಗಾಗಲೇ ಕೊಳವೆ ಬಾವಿ ಹಾಗೂ ಟ್ಯಾಂಕರ್‌ಗಳ ಮೂಲಕ ಜನರಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಬೋರ್ ಕುಸಿದಿದ್ದ ಗ್ರಾಮಗಳಲ್ಲಿ ರೀ ಬೋರ್ ಮಾಡಲಾಗಿದೆ. ಇಷ್ಟು ಮಾಡಿಯೂ ಸರ್ಕಾರಿ ಬೋರ್‌ಗಳಲ್ಲಿ ನೀರಿನ ಕೊರತೆ ಎದುರಾದರೆ ನೀರಿನ ಮೂಲ ಹೊಂದಿರುವ ಖಾಸಗಿ ವ್ಯಕ್ತಿಗಳಿಂದ ನೀರು ಖರೀದಿಸಿ ಟ್ಯಾಂಕರ್‌ಗಳ ಮೂಲಕ ಜನ-ಜಾನುವಾರುಗಳಿಗೆ ನೀರು ಪೂರೈಸುವ ಮೂಲಕ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

    ಪ್ರಸ್ತುತ ಗೌಡಹಳ್ಳಿ, ಟಿ.ಎಂ.ಹೊಸೂರು ಬೋರವೆಲ್ಗಳಲ್ಲಿ ನೀರಿನ ಲಭ್ಯತೆ ಇದ್ದು, ಕೋಡಿಶೆಟ್ಟಿಪುರ, ಬಳ್ಳೆಕೆರೆ, ಗಾಮನಹಳ್ಳಿ ಭಾಗಗಳಲ್ಲಿ ನೀರಿನ ಬವಣೆ ಕಂಡು ಬಂದಿದೆ. ಹಾಗಾಗಿ ಟ್ಯಾಂಕರ್‌ಮೂಲಕ ರವಾನಿಸಿ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಿ ಎಂದರು.

    ಟಿಪಿಒ ದೇವಮ್ಮ, ರಾಜಶ್ವ ನಿರೀಕ್ಷಕರಾದ ಮಂಜುನಾಥ್, ರೇವಣ್ಣ ಇತರರು ಸಭೆಯಲ್ಲಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts