10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿರಿ ಮುಂದುವರಿಯಿರಿ ನೋಡೋಣ: ಎಚ್​ಡಿಕೆ ಸವಾಲು

hdk

ಬೆಂಗಳೂರು: ಇನ್ನೂ ಹತ್ತು ವರ್ಷ ನಮ್ಮದೇ ಅಧಿಕಾರ, ಸರ್ಕಾರ ಎಂದು ಕಾಂಗ್ರೆಸ್ ನಾಯಕರು ಬೀಗುತ್ತಿದ್ದಾರೆ. ಹತ್ತು ವರ್ಷದ ಮಾತಿರಲಿ, ಹತ್ತು ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.

ಇದನ್ನೂ ಓದಿ: ಕೆಎಸ್ಆರ್‌ಟಿಸಿ ಡಿಕ್ಕಿ: ಬೆಳ್ಳಂಬೆಳಗ್ಗೆ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಂಗಳೂರಿನಿಂದ ಮೈಸೂರುವರೆಗೆ ಜೆಡಿಎಸ್ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾತನಾಡಿದ ಅವರು, ನಿಮ್ಮ ಸರ್ಕಾರವನ್ನು ಯಾರೂ ಅಸ್ಥಿರ ಮಾಡಿಕೊಳ್ಳುತ್ತಿಲ್ಲ. ನೀವೇ ಜನರು ಕೊಟ್ಟ ಅವಕಾಶವನ್ನು ಹಾಳು ಮಾಡಿಕೊಳ್ಳುತ್ತಿದ್ದೀರಿ. ಹಗರಣಗಳ ಮೇಲೆ ಹಗರಣಗಳನ್ನು ನಡೆಸಿ ಅಕ್ರಮ ಎಸಗಿದ್ದೀರಿ. ಈಗ ನೋಡಿದರೆ ಜೆಡಿಎಸ್ ಬಿಜೆಪಿ ಪಕ್ಷಗಳನ್ನು ಪ್ರಶ್ನೆ ಮಾಡುತ್ತೇವೆ ಎಂದು ಹೊರಟಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ಇದು ಅತ್ಯಂತ ಭ್ರಷ್ಟ, ಕೆಟ್ಟ ಸರ್ಕಾರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಅಧಿಕಾರಕ್ಕೆ ಬಂದು ಜನಪರ ಕೆಲಸ ಮಾಡುವುದು ಬಿಟ್ಟು ಕಾನೂನು ಬಾಹಿರ ಚಟುವಟಿಕೆಗಳು, ಭ್ರಷ್ಟಾಚಾರದಲ್ಲಿ ನಿರತರಾಗಿದ್ದೀರಿ. ಹಿಂದೆಂದೂ ಕಂಡಿರದಂತಹ ಭ್ರಷ್ಟ ಸರಕಾರವನ್ನು ಕಾಣುತ್ತಿದ್ದೇವೆ ಎಂದು ಕೇಂದ್ರ ಸಚಿವರು ದೂರಿದರು.

ಈ ಕೆಟ್ಟ ಕಾಂಗ್ರೆಸ್ ಜನ ವಿರೋಧಿ ಸರ್ಕಾರದ ವಿರುದ್ಧ ನಾವು ಜಂಟಿ ಹೋರಾಟ ಹಮ್ಮಿಕೊಂಡಿದ್ದೇವೆ. ಜನರಿಗೆ ಇವರ ಆಕ್ರಮಗಳನ್ನು ಮನವರಿಕೆ ಮಾಡಿಕೊಡುತ್ತೇವೆ. ಆದಿಶಕ್ತಿ ತಾಯಿ ಕೆಂಪಮ್ಮ ದೇವಿಗೆ ಪೂಜೆ ಸಲ್ಲಿಸಿ ಯಡಿಯೂರಪ್ಪನವರ ಇನ್ನಿತರೆ ಮಾರ್ಗದರ್ಶಕರ ನೇತೃತ್ವದಲ್ಲಿ ಮೈಸೂರು ಪಾದಯಾತ್ರೆ ಮಾಡುತ್ತಿದ್ದೇವೆ. ನಾಡಿನ ಜನತೆಯ ಅಭಿಪ್ರಾಯ ಏನಿದೆ ಅದರ ಪರವಾಗಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಅವರು ಕಿಡಿಕಾರಿದರು.

ನನ್ನ ಪ್ರಶ್ನೆಗೆ ಪರಮೇಶ್ವರ್ ಉತ್ತರ ಕೊಡಲಿ: ಸಚಿವ ಡಾ.ಪರಮೇಶ್ವರ ಅವರು ಹಲವಾರು ಪ್ರಶ್ನೆಗಳನ್ನು ಹಾಕಿದ್ದಾರೆ. ಆದರೆ, ಅವರು ನನ್ನ ಒಂದು ಪ್ರಶ್ನೆಗೆ ಉತ್ತರ ಕೊಡಲಿ. ಯಾದಗಿರಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಮ್ಮ ಸಮಾಜದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಕೆ ಅವರು ಜೀವ ಕಳೆದುಕೊಂಡರು? ಬದುಕು ಕೊನೆ ಮಾಡಿಕೊಂಡ ಆ ಪೊಲೀಸ್ ಅಧಿಕಾರಿಯ ಪತ್ನಿ ಹೇಳ್ತಾರೆ, ಪೋಸ್ಟಿಂಗ್ ಗೆ 25 ಲಕ್ಷ ರೂಪಾಯಿ ಲಂಚ ಹಣ ಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ತಾಯಿ ಯಾರ ವಿರುದ್ಧ ಆರೋಪ ಮಾಡಿದ್ದಾರೆ? ಅದರ ಬಗ್ಗೆ ಪರಮೇಶ್ವರ ಅವರು ಉತ್ತರ ಕೊಡಲಿ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದರು.

ಸಾಮಾಜಿಕ ನ್ಯಾಯ ಎಂದು ಹೇಳಿಕೊಂಡು ರಾಜಕೀಯ ಲಾಭ ಪಡೆಯುವ ನೀವು, ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊಡುವ ಗೌರವ ಇದೇನಾ? 2012ರಲ್ಲಿ ನಿಮ್ಮ ಆಡಳಿತದ ಅವಧಿಯಲ್ಲಿ ಓರ್ವ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಮ್ಮದೇ ಸಮಾಜದ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗಲೂ ಅದು ಮುಂದುವರಿದೆ. ಇಂಥ ಸಾವುಗಳನ್ನು ತಡೆಯುವ ಶಕ್ತಿ ನಿಮಗೆ ಇಲ್ಲವೇ? ಎಂದು ಮುಖ್ಯಮಂತ್ರಿ ಅವರನ್ನು ಕೇಂದ್ರ ಸಚಿವರು ತರಾಟೆಗೆ ತೆಗೆದುಕೊಂಡರು.

ಸಿಎಂ ಮೇಲೆ ತೀವ್ರ ವಾಗ್ದಾಳಿ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಹಕ್ಕಿದೆ. ಅದನ್ನು ಎತ್ತಿ ಹಿಡಿಯುವ ಕೆಲಸವನ್ನು ನಾವ್ಯಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಈ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಿದ್ದೇವೆ. ಮೂಡಾ ಹಗರಣದಲ್ಲಿ ನಿಮ್ಮ ಹೆಸರು ಬಂದಿದೆ. ನಿವು ನಿವೇಶನ ಪಡೆದಿರುವುದಕ್ಕೆ ನಮಗೆ ಅಭ್ಯಂತರ ಇಲ್ಲ. ಆದರೆ,ಸರ್ಕಾರದ ಜಮೀನು ನಿಮ್ಮ ಬಾಮೈದನ ಹೆಸರಿಗೆ ಖರೀದಿಸಿ, ಆ ನಂತರ ಸಹೋದರಿಗೆ ಕೊಡುತ್ತೀರಿ..! ಇದು ಹೇಗೆ ರವಾನೆಯಾಗಿದೆ ಎನ್ನುವುದು ನಿಮಗೆ ಗೊತ್ತಿಲ್ಲವೇ ಸಿದ್ದರಾಮಯ್ಯನವರೇ..? ಎಂದು ಕೇಂದ್ರ ಸಚಿವರು ರಾಜ್ಯದ ಮುಖ್ಯಮಂತ್ರಿಗಳನ್ನು ತೀಕ್ಷ್ಣವಾಗಿ ಪ್ರಶ್ನಿಸಿದರು.

ಹಣ ಕೊಳ್ಳೆ ಹೊಡೆಯೋದು ಸಾಮಾಜಿಕ ನ್ಯಾಯವೇ: ವಾಲ್ಮೀಕಿ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಎಂದು ಮಾತು ಮಾತಿಗೂ ಹೇಳುತ್ತೀರಿ. ದಲಿತರ ಉದ್ಧಾರ ಎಂದು ಭಾಷಣ ಬಿಗಿಯುತ್ತೀರಿ. ಆದರೆ, ಅಂಬೇಡ್ಕರ್ ಹೆಸರಿನಲ್ಲಿ ಹಣ ಲೂಟಿ ಮಾಡಿದ್ದೀರಿ. ಬಾಬಾ ಸಾಹೇಬ್ ಅವರಿಗೆ ಗೌರವ ಕೊಡೋದು ಎಂದರೆ, ಯಾರಿಗಾಗಿ ಅವರು ತಮ್ಮ ಬದುಕು ಮುಡಿಪಿಟ್ಟು ಹೋರಾಟ ನಡೆಸಿದರೋ ಆ ಜನಗಳ ಹಣ ಕೊಳ್ಳೆ ಹೊಡೆಯೋದಾ? ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ನಾನು, ಯಡಿಯೂರಪ್ಪನವರು ಸೇರಿ ವಾಲ್ಮೀಕಿ ನಿಗಮ ಸ್ಥಾಪನೆ ಮಾಡಿದೆವು. ದುರ್ಬಲರಿಗೆ ಶಕ್ತಿ ಬರಲಿ ಎನ್ನುವ ಒಳ್ಳೆಯ ಉದ್ದೇಶದಿಂದ ಈ ಕೆಲಸ ಮಾಡಿದೆವು. ಈ ನಿಗಮದಲ್ಲಿ 89 ಕೋಟಿ ರೂ. ಅಕ್ರಮ ಆಗಿದೆ ಎಂದು ನೀವೇ ಹೇಳಿದ್ದೀರಿ. ಹಗರಣ ನಡೆದಿದೆ ಎಂದು ಒಪ್ಪಿಕೊಂಡಿದ್ದೀರಿ. ನಿಮ್ಮ ನಿಜವಾದ ಬಣ್ಣ ಬಯಲಾಗತ್ತದೆ ಎಂದು ಹೆದರಿ ಕದ್ದು ಓಡಿದವರು ನೀವು. ಈಗ ನೋಡಿದರೆ ಮೂಡ ಹಗರಣ ಮುಚ್ಚಿಹಾಕಲು ಮುಂದಾಗಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಬಣ್ಣ ಪರ್ಮನೆಂಟ್ ಪರಮೇಶ್ವರ್ ಅವರೇ: ಪರಮೇಶ್ವರ್ ಅವರು ಹೇಳುತ್ತಾರೆ, ನಾವು ಬಣ್ಣ ಬದಲಾಯಿಸಿದೇವೆ ಎಂದು. ನನ್ನ ಬಣ್ಣ ಬದಲಾಗಲು ಸಾಧ್ಯವೇ ಇಲ್ಲ ಪರಮೇಶ್ವರ್ ರವರೇ. ಇದು ಪರ್ಮನೆಂಟ್ ಬಣ್ಣ.. ಎಂದು ತಮ್ಮ ಬಣ್ಣದ ಬಗ್ಗೆ ಮಾತನಾಡಿದ ಸಚಿವರಿಗೆ ಟಾಂಗ್ ಕೊಟ್ಟರು ಕೇಂದ್ರ ಸಚಿವರು.

ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಏಕವಚನದಲ್ಲಿ ಮಾತನಾಡುತ್ತಿರಿ ನೀವು. ನಾನು,ಸಿದ್ದರಾಮಯ್ಯ ನವರ ಪರವಾಗಿದ್ದೇನೆ ಎನ್ನುತ್ತೀರಿ. ನಿಮ್ಮ ನಾಟಕ ಬಯಲಾಗತ್ತದೆ, ಕಾದು ನೋಡಿ ಪರಮೇಶ್ವರ್ ಅವರೇ, ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.  ಪಾದಯಾತ್ರೆಗೆ ಚಾಲನೆ: ಸಭೆಯ ನಂತರ ನಗಾರಿ ಭಾರಿಸುವ ಮೂಲಕ, ಕಹಳೆ ಮೊಳಗಿಸಿದ ನಂತರ ಎಲ್ಲಾ ನಾಯಕರು ಪಾದಯಾತ್ರೆಗೆ ಚಾಲನೆ ನೀಡಿದರು.

ಬಿಹಾರದಲ್ಲಿ ಸಿಡಿಲು ಬಡಿದು 8 ಮಂದಿ ಸಾವು

Share This Article

ಗರ್ಭಾವಸ್ಥೆಯಲ್ಲಿ ತೂಕ ಹೆಚ್ಚಾಗಲು ಕಾರಣ ಏನು ಗೊತ್ತಾ?; ಇಲ್ಲಿದೆ ಕಂಪ್ಲೀಟ್​ ಮಾಹಿತಿ | Health Tips

ಗರ್ಭಾವಸ್ಥೆಯಲ್ಲಿ ತೂಕ ಹೆಚ್ಚಾಗುವುದು ಸಹಜ. ಈ ಅವಧಿಯಲ್ಲಿ ತೂಕ ಹೆಚ್ಚಾಗುವುದು ಮಗು ಸರಿಯಾಗಿ ಬೆಳೆಯುತ್ತಿದೆ ಎಂಬುದರ…

ಗರ್ಭಿಣಿಯರು ಈ ಪದಾರ್ಥಗಳಿಂದ ದೂರವಿರಿ; ಇಲ್ಲವಾದಲ್ಲಿ ಮಗುವಿಗೆ ಅಪಾಯ ತಪ್ಪಿದ್ದಲ್ಲ | Health Tips

ಪ್ರತಿಯೊಬ್ಬ ಮಹಿಳೆಯೂ ತನ್ನ ಗರ್ಭಾವಸ್ಥೆಯು ಆರೋಗ್ಯಕರವಾಗಿರಬೇಕು ಎಂದು ಬಯಸುತ್ತಾರೆ. ಇದರಿಂದ ತಾಯಿ ಮತ್ತು ಭ್ರೂಣದ ಆರೋಗ್ಯವು…

ಮದುವೆಯಾಗಲು ಸೂಕ್ತ ವಯಸ್ಸು ಯಾವುದು?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಪರಿಹಾರ … | Marriage

ನಮ್ಮಲ್ಲಿ ಹೆಚ್ಚಿನವರು ತಾವು ಬಯಸಿ ಅಥವಾ ಬಯಸದಿದ್ದರೂ ಒಂದು ಹಂತದಲ್ಲಿ ಮದುವೆಯಾಗಲು ಒತ್ತಡವನ್ನು ಅನುಭವಿಸುತ್ತಾರೆ. ವಯಸ್ಸು…