ಸ್ಥಳೀಯರಲ್ಲಿ ಪರಿಸರ ಶುಚಿತ್ವ ಜಾಗೃತಿ

beach
Published on

ಕೋಟ: ಪರಿಸರದ ಸ್ವಚ್ಛತೆ ಬಗ್ಗೆ ಸ್ಥಳೀಯರು ಜಾಗೃತಿ ಹೊಂದಬೇಕು ಆಗಲೇ ಪರಿಸರ ಶುಚಿಯಾಗಿಡಲು ಸಾಧ್ಯ ಎಂದು ಕೋಡಿ ಗ್ರಾಪಂ ಮಾಜಿ ಉಪಾಧ್ಯಕ್ಷ ಅಣ್ಣಪ್ಪ ಕುಂದರ್ ಹೇಳಿದರು.

ಕೋಡಿ ಹೊಸಬೇಂಗ್ರೆ ಬೀಚ್ ಪ್ರದೇಶದಲ್ಲಿ ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲ ನೇತೃತ್ವದಲ್ಲಿ 233ನೇ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಕೋಡಿ ಗ್ರಾಪಂ, ಸಂಜೀವಿನಿ ಒಕ್ಕೂಟ, ಪಂಚಶಕ್ತಿ ಸಂಘ ಕೋಡಿ ತಲೆ, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ ಸಹಯೋಗದೊಂದಿಗೆ ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೋಡಿ ಗ್ರಾಪಂ ಅಧ್ಯಕ್ಷೆ ಗೀತಾ ಕಾರ್ವಿ ಅಧ್ಯಕ್ಷತೆ ವಹಿಸಿದ್ದರು. ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್,ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯದರ್ಶಿ ವಸಂತಿ ಹಂದಟ್ಟು, ಯುವಕ ಮಂಡಲ ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಪಂಚಶಕ್ತಿ ಸಂಘ ಕೋಡಿ ತಲೆ ಕಾರ್ಯದರ್ಶಿ ಸಂದೀಪ್, ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ದೀಪಾ ಕಾರ್ವಿ, ಕೋಡಿ ಹೊಸಬೇಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್.ಕುಂದರ್, ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್, ಎಸ್‌ಎಲ್‌ಆರ್‌ಎಂ ಘಟಕ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಸದಸ್ಯ ರವೀಂದ್ರ ಕೋಟ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net