

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೆರಮೇಲದೊಡ್ಡಿ ಗ್ರಾಮದಲ್ಲಿ ಮಂಗಳವಾರ ನವಿಲು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ಅಂತೆಯೆ ಮಳವಳ್ಳಿ ತಾಲೂಕು ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕರಡಿ ಗುಂಡಿಗೆ ಬಿದ್ದು ಸಾವನ್ನಪ್ಪಿದೆ. ಆದರೆ ಈ ಎರಡು ಪ್ರಕರಣದಲ್ಲಿ ಮಾಹಿತಿ ನೀಡಿದರೂ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬೇಗ ಆಗಮಿಸದ ಕಾರಣ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವಿಲು ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ. ಇತ್ತ ಕರಡಿಗೆ ವಯಸ್ಸಾಗಿತ್ತು. ಈ ಹಿನ್ನೆಲೆಯಲ್ಲಿ 12 ಅಡಿ ಆಳದ ಗುಂಡಿಗೆ ಬಿದ್ದಿರುವ ಪರಿಣಾಮ ಮೃತಪಟ್ಟಿದೆ.