ಸಿಬ್ಬಂದಿ ಶ್ರಮದಿಂದ ಸುಂದರ ಪರಿಸರ

kit
Published on

ಕಾರ್ಕಳ: ಪರಿಸರ, ನಗರ ಸ್ವಚ್ಛವಾಗಿರಲು ಸದಾ ಶ್ರಮಿಸುವ ಸ್ವಚ್ಛತಾ ಸಿಬ್ಬಂದಿ ಶ್ರಮ ಶ್ಲಾಘನೀಯ. ಸುಂದರ ಪರಿಸರ ಹಾಗೂ ಸಮಾಜ ನಿರ್ಮಾಣಕ್ಕೆ ಮಹಿಳಾ ಸ್ವಚ್ಛತಾ ಸಿಬ್ಬಂದಿ ಪಾತ್ರ ಮಹತ್ತರವಾಗಿದೆ ಎಂದು ಕರುಣಾಳು ಬಾ ಬೆಳಕು ಪ್ರತಿಷ್ಠಾನದ ರಮಿತಾ ಶೈಲೇಂದ್ರ ಹೇಳಿದರು.

ಕಾರ್ಕಳ ಪುರಸಭೆ ವ್ಯಾಪ್ತಿಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಮಹಿಳಾ ಸಿಬ್ಬಂದಿಗೆ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಆಹಾರ ಕಿಟ್ ವಿತರಿಸಿ ಮಾತನಾಡಿದರು.

ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ ಮಾತನಾಡಿ, ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಸ್ವಚ್ಛತಾ ಸಿಬ್ಬಂದಿಯೊಂದಿಗೆ ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಿದ ಕರುಣಾಳು ಬಾ ಬೆಳಕಿನ ತಂಡದ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್, ಮಮತಾ, ಸ್ವಾತಿ, ಸಂತೋಷ್, ಪಲ್ಲವಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net