ಕೊರಿಯಾದಲ್ಲಿ ಜನರು ಕೆಲಸದ ದಿನದ ನಂತರ ಸಂಜೆ ಮನೆಗೆ ಬಂದಾಗ ರಾತ್ರಿ ಸ್ನಾನ ಮಾಡಲು ಇಷ್ಟಪಡುತ್ತಾರೆ. ಇದರಿಂದಾಗಿ ರಾತ್ರಿ ಚೆನ್ನಾಗಿ ನಿದ್ರೆ ಬರುತ್ತದೆ. ಇನ್ನು ಜಪಾನಿನ ಜನರು ರಾತ್ರಿ ಸ್ನಾನ ಮಾಡಿ ವಿಶ್ರಾಂತಿ ಪಡೆಯುತ್ತಾರೆ ಮತ್ತು ಮಾನಸಿಕವಾಗಿ ಉತ್ತಮ ನಿದ್ರೆ ಬರುತ್ತದೆ ಎಂಬುದು ಅವರ ನಂಬಿಕೆಯಾಗಿದೆ. ರಾತ್ರಿ ಸ್ನಾನ ಮಾಡುವುದರಿಂದ ಹಗಲಿನಲ್ಲಿ ಸಂಗ್ರಹವಾದ ಕೊಳೆಯನ್ನು ತೊಳೆದು ದೇಹವು ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ. ಅಲ್ಲದೆ, ಬೆಡ್ಶೀಟ್ಗಳ ಮೇಲೆ ಸಂಗ್ರಹವಾಗುವ ಎಣ್ಣೆ ಮತ್ತು ಕೊಳೆಯ ಪ್ರಮಾಣವೂ ಕಡಿಮೆಯಾಗುತ್ತದೆ. ಇದರಿಂದ ಚರ್ಮದ ಆರೋಗ್ಯವು ಉತ್ತಮವಾಗಿರುತ್ತದೆ. ಆದಾಗ್ಯೂ, ಯುನೈಟೆಡ್ ಸ್ಟೇಟ್ಸ್, ಯುರೋಪ್ ಮತ್ತು ಕೆನಡಾದಂತಹ ಪಾಶ್ಚಿಮಾತ್ಯ ರಾಷ್ಟ್ರಗಳ ಜನರು ಬೆಳಗಿನ ಸಮಯದಲ್ಲಿ ಸ್ನಾನ ಮಾಡಲು ಬಯಸುತ್ತಾರೆ.