More

    ಎಸ್ಸೆಸ್ಸೆಲ್ಸಿ ಪಾಸಾಗಿದ್ದೀರಾ? ಬಿಇಸಿಐಎಲ್ ನಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್​​ ಆಗಿ

    ನವದೆಹಲಿ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉದ್ಯಮವಾಗಿರುವ ಬ್ರಾಡ್​ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲುದ್ದೇಶಿಸಿದ್ದು, ಅಂಗೀಕೃತ ಸಂಸ್ಥೆ / ಮಂಡಳಿಯಿಂದ 10 ನೇ ತರಗತಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
    ಒಟ್ಟು 464 ಹುದ್ದೆಗಳಿವೆ. ಮಾಸಿಕ ಗೌರವ ಧನ 14,842 ರೂ.ಇರುತ್ತದೆ.10 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ / ಸಂದರ್ಶನ ಇರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು www.becil.com ವೆಬ್​ಸೈಟ್​​ನಿಂದ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜೂನ್ 15 ರೊಳಗಾಗಿ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.

    ವಿದ್ಯಾರ್ಥಿಗಳ ಸುರಕ್ಷತೆಗಾಗಿ ಎಐ ಆಧಾರಿತ ಎಲ್ಎಸ್​​ಎಟಿ ಆನ್​​​ಲೈನ್ ಪರೀಕ್ಷೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts