ಬೆಡ್​​ ಹಂಚಿಕೆ ಬಗ್ಗೆ ಸಭೆ ; 2 ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ನೋಟೀಸ್

sabhe
Published on

ಬೆಂಗಳೂರು: ಆಸ್ಪತ್ರೆ ಬೆಡ್​ ಹಂಚಿಕೆ ಸಂಬಂಧಿಸಿದಂತೆ ಚರ್ಚೆಗೆ ಕರೆಯಲಾದ ಸಭೆಗೆ ಗೈರುಹಾಜರಾದ 2 ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ನೋಟೀಸ್ ನೀಡಿ ಸಮಜಾಯಿಷಿ ಕೇಳಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ‌, ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಮಕ್ಷಮ ಹಾಸಿಗೆ‌ ಹಂಚಿಕೆಗೆ‌ ಸಂಬಂಧಿಸಿದಂತೆ ಬೆಂಗಳೂರಿನ ಖಾಸಗಿ‌ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಯುತ್ತಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net