More

    ಮಕ್ಕಳಿಗಾಗಿ 100 ಬೆಡ್ ಕಾಯ್ದಿರಿಸಿ: ವೈದ್ಯಕೀಯ ತಜ್ಞರ ಸಮಿತಿ ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸೂಚನೆ

    ಉಡುಪಿ: ಕೋವಿಡ್ 3ನೇ ಅಲೆ ಸಾಧ್ಯತೆ ಮತ್ತು ಮಕ್ಕಳ ಆರೋಗ್ಯ ರಕ್ಷಣೆಗಾಗಿ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಮಕ್ಕಳ ಚಿಕಿತ್ಸೆಗಾಗಿ ಕೆಎಂಸಿಯಲ್ಲಿ 40 ಐಸಿಯು ಬೆಡ್ ಮತ್ತು ಜಿಲ್ಲಾಸ್ಪತ್ರೆ ಮತ್ತು ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಒಟ್ಟು 60 ಬೆಡ್‌ಗಳನ್ನು ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವೈದ್ಯಕೀಯ ತಜ್ಞರ ಸಮಿತಿ ಸಭೆ ನಡೆಸಿದ ಅವರು, ಮಕ್ಕಳಿಗೆ ನೀಡಬೇಕಾದ ಚಿಕಿತ್ಸೆ ವಿಧಾನಗಳ ಕುರಿತು ಭಾರತೀಯ ಮಕ್ಕಳ ವೈದ್ಯರ ಸಂಘ ಸಿದ್ಧಪಡಿಸಿರುವ ವಿಧಾನಗಳ ಬಗ್ಗೆ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಶುಶ್ರೂಷಕ ಸಿಬ್ಬಂದಿಗೆ ಮಣಿಪಾಲದ ಕೆಎಂಸಿಯಲ್ಲಿ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ಉಪಕರಣಗಳ ಬಳಕೆ ಕುರಿತಂತೆ ತಾಂತ್ರಿಕ ತರಬೇತಿ ನೀಡಬೇಕು ಎಂದು ಸೂಚಿಸಿದರು.

    ಪೋಷಕರು ಅನಗತ್ಯವಾಗಿ ತಮ್ಮ ಮಕ್ಕಳನ್ನು ಜನಸಂದಣಿ ಇರುವ ಪ್ರದೇಶಗಳಿಗೆ ಕರೆದೊಯ್ಯದೆ, ಮನೆಯಲ್ಲಿ ಪೌಷ್ಟಿಕ ಆಹಾರ ನೀಡುವ ಮೂಲಕ ರೋಗ- ನಿರೋಧಕ ಶಕ್ತಿ ಹೆಚ್ಚಿಸಬೇಕು ಎಂದು ಮಕ್ಕಳ ತಜ್ಞರು ಸಲಹೆ ನೀಡಿದರು.
    ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಎಚ್‌ಒ ಡಾ.ನಾಗಭೂಷಣ ಉಡುಪ, ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts