More

  ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

  ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

  ಮಧ್ಯಾಹ್ನ 3.30ರ ಸುಮಾರಿನಲ್ಲಿ ಯಾರೋ ಕಿಡಿಗೇಡಿಗಳು ಹೆಜ್ಜೇನು ಗೂಡಿಗೆ ಕಲ್ಲು ಹೊಡೆದಿದ್ದದ್ದಾರೆ ಎನ್ನಲಾಗಿದ್ದು, ಕಾಲೇಜ್​ನಲ್ಲಿದ್ದ ಹುಡುಗರು ಓಟಕಿತ್ತು ಹುಳುಗಳ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ಕ್ಲಾಸ್ ರೂಮಿಗೆ ನುಗ್ಗಿದ ಹೆಜ್ಜೇನುಗಳು ವಿದ್ಯಾರ್ಥಿನಿಯರ ಮೇಲೆ ದಾಳಿ ನಡೆಸಿವೆ. ಈ ವೇಳೆ ಕಾಲೇಜ್​ನ ಕೆಲ ಉಪನ್ಯಾಸಕರು, ಸಿಬ್ಬಂದಿ ಗಾಯಗೊಂಡಿದ್ದಾರೆ.

  ವಿದ್ಯಾರ್ಥಿಗಳಾದ ವಾಣಿ, ಲಕ್ಷ್ಮಿ, ಮಹಾದೇವ ಇತರರು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಬಿಸಿಎ ವಿಭಾಗದ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್​ಗೆ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಜೆಯ ವೇಳೆಗೆ ಕಾಲೇಜ್​ನಲ್ಲಿದ್ದ ಹೆಜ್ಜೇನು ಗೂಡನ್ನು ತೆರವುಗೊಳಿಸಲಾಯಿತು.

  ಕಾಲೇಜ್ ಆಡಳಿತ ಮಂಡಳಿ ವಿರುದ್ಧ ಆಕ್ರೋಶ: ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿರುವ ಕಾಲೇಜ್​ನಲ್ಲಿ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಮುಂಜಾಗ್ರತೆ ವಹಿಸದೇ ಇರುವುದೇ ಘಟನೆಗೆ ಕಾರಣವಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ. ಯಾರ್ಯಾರಿಗೆ ಜೇನು ಕಚ್ಚಿದೆ ಎಂಬ ಮಾಹಿತಿಯನ್ನೂ ತಿಳಿಸುತ್ತಿಲ್ಲ. ಮಕ್ಕಳು ಮನೆಗೆ ಬಂದಿಲ್ಲ. ಕೆಲವರು ಜಿಲ್ಲಾಸ್ಪತ್ರೆಯಲ್ಲಿದ್ದರೆ, ಇನ್ನು ಕೆಲವರು ಕಿಮ್ಸ್​ಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಪ್ರಾಚಾರ್ಯರಂತೂ ಫೋನ್ ಕರೆಗಳನ್ನೇ ಸ್ವೀಕರಿಸುತ್ತಿಲ್ಲ. ಇಂಥ ಬೇಜವಾಬ್ದಾರಿ ಪ್ರಾಚಾರ್ಯರ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಳ್ಳಬೇಕು ಎಂದು ಆಸ್ಪತ್ರೆಗೆ ಬಂದಿದ್ದ ಪಾಲಕರು ದೂರಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts