More

    ಕೆರೆಗಳ ಅಭಿವೃದ್ಧಿಗೆ ಬದ್ಧ

    ಬೀಳಗಿ: ಕೆರೆಗಳ ಪುನಃಶ್ಚೇತನ ಹಾಗೂ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಕಾಲುವೆಗಳ ಮೂಲಕ ಕೆರೆಗಳಿಗೆ ನೀರು ತುಂಬಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಹೇಳಿದರು.

    ತಾಲೂಕಿನ ಜಾನಮಟ್ಟಿ ಗ್ರಾಮದಲ್ಲಿ ಕೆರೆಗೆ ಬಾಗಿನ ಅರ್ಪಿಸಿ ಹಾಗೂ ಲೋಕೋಪಯೋಗಿ, ಸಮಾಜ ಕಲ್ಯಾಣ ಇಲಾಖೆ ಯೋಜನೆಯಡಿ 25 ಲಕ್ಷ ರೂ. ವೆಚ್ಚದಲ್ಲಿ ಪರಿಶಿಷ್ಟ ಪಂಗಡದ ಸ್ಮಶಾನ (ರುದ್ರ) ಭೂಮಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
    ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಹೆಚ್ಚಾಗಿ ಬೋರ್‌ವೆಲ್‌ಗಳಲ್ಲಿ ನೀರು ಹೆಚ್ಚುತ್ತದೆ. ಅಲ್ಲದೆ, ಜನಜಾನುವಾರುಗಳಿಗೆ ಅನುಕೂಲವಾಗಲಿದೆ. ಗ್ರಾಮಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಸರ್ಕಾರಿ ಕಾಮಗಾರಿಗಳಿಗೆ ಗ್ರಾಮಸ್ಥರು ಸಹಕಾರ ನೀಡಬೇಕು. ಗುತ್ತಿಗೆದಾರರು ಮಾಡುವ ಕಾಮಗಾರಿಗಳು ಗುಣಮಟ್ಟದ್ದಾಗಿರಬೇಕು ಎಂದರು.

    ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಸಹಾಯಕ ನಿರ್ದೇಶಕ ಗ್ರೇಡ್-2 ಎಚ್.ಎಂ. ಪಾಟೀಲ, ಪಿಡಬ್ಲುೃಡಿ ಎಇಇ ಸುರೇಶ, ವಿ.ಕೆ. ದೇಸಾಯಿ, ಎನ್.ಸಿ. ರಾಠೋಡ, ಬಸವರಾಜ ಬಾರಾಗಣಿ, ಪ್ರಕಾಶ ಮಟ್ಟಿ, ರುದ್ರಗೌಡ ವಟವಟಿ, ಯಲಗುರದಪ್ಪ ಬಂಡಿ ಹಾಗೂ ಇನ್ನೂ ಅನೇಕರು ಇದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts