25.1 C
Bangalore
Friday, December 6, 2019

ನೂತನ ಮೋಟಾರು ವಾಹನ ಕಾಯ್ದೆ ಜಾರಿಗೂ ಮುನ್ನವೇ ಟ್ರಕ್‌ ಚಾಲಕನಿಗೆ ವಿಧಿಸಿದ್ದು ಬರೋಬ್ಬರಿ 6.53 ಲಕ್ಷ ದಂಡ!

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಭುವನೇಶ್ವರ: ಸೆಪ್ಟೆಂಬರ್‌ 1ರಿಂದ ನೂತನ ಮೋಟಾರು ಕಾಯ್ದೆ ತಿದ್ದುಪಡಿ ಜಾರಿಯಾಗಿದ್ದು, ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಭಾರಿ ಮೊತ್ತದ ದಂಡವನ್ನು ವಿಧಿಸಲಾಗುತ್ತಿದೆ. ಆದರೆ, ನಾಗಾಲ್ಯಾಂಡ್​ನ ನೋಂದಣಿ ಸಂಖ್ಯೆ ಹೊಂದಿರುವ ಟ್ರಕ್‌ಗೆ ನೂತನ ಕಾಯ್ದೆ ಜಾರಿಗೂ ಮುನ್ನವೇ 6.53 ಲಕ್ಷ ದಂಡ ವಿಧಿಸಿರುವ ಘಟನೆ ಒಡಿಶಾದ ಸಂಬಲಪುರದಲ್ಲಿ ನಡೆದಿದೆ.

ಹಲವಾರು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಗಸ್ಟ್‌ 10ರಂದು ದಂಡವನ್ನು ವಿಧಿಸಲಾಗಿದ್ದು, ಶನಿವಾರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಸಂಬಲಪುರ ಪ್ರಾದೇಶಿಕ ಸಾರಿಗೆ ಕಚೇರಿ(ಆರ್‌ಟಿಒ) ಚಾಲಕ ದಿಲೀಪ್‌ ಕುಮಾರ್‌ ಕರ್ತಾ ಎಂಬುವರಿಗೆ ಚಲನ್‌ ನೀಡಿದೆ ಮತ್ತು NL 08 D 7079 ನೋಂದಣಿ ಸಂಖ್ಯೆಯ ಟ್ರಕ್‌ ಮಾಲೀಕ ಶೈಲೇಶ್‌ ಶಂಕರ್‌ ಲಾಲ್ ಗುಪ್ತಾ ಎಂಬುವರಿಗೂ ಚಲನ್‌ ನೀಡಿದೆ.

ಒಡಿಶಾ ಮೋಟಾರು ವಾಹನಗಳ ತೆರಿಗೆ ಕಾಯ್ದೆ ಅಡಿಯಲ್ಲಿ ಒಟ್ಟಾರೆ 6.53 ಲಕ್ಷ ರೂ. ದಂಡದ ಮೊತ್ತದಲ್ಲಿ ಜು. 21, 2014 ರಿಂದ ಸೆ. 30, 2019ರವರೆಗಿನ ಐದು ವರ್ಷಗಳಿಂದಲೂ ರಸ್ತೆ ತೆರಿಗೆ ಪಾವತಿಸದ ಮಾಲೀಕರಿಗೆ 6,40,500 ರೂ.ಗಳ ದಂಡ ವಿಧಿಸಲಾಗಿದೆ.

ವಾಹನ ಇನ್ಶೂರೆನ್ಸ್‌ ಸೇರಿ ದಾಖಲೆಗಳನ್ನು ಕೊಂಡೊಯ್ಯದಿದ್ದಕ್ಕೆ, ವಾಯು ಮತ್ತು ಶಬ್ದ ಮಾಲಿನ್ಯವನ್ನು ಉಲ್ಲಂಘಿಸಿದ್ದಕ್ಕೆ, ಗೂಡ್ಸ್‌ ವಾಹನದಲ್ಲಿ ಪ್ರಯಾಣಿಕರನ್ನು ಕರೆದೊಯ್ದಿದ್ದಕ್ಕೆ ಮತ್ತು ಪರವಾನಗಿ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆರ್‌ಟಿಒ ದಂಡ ವಿಧಿಸಿದೆ.

ಚಲನ್‌ ಕಾಪಿ ಪ್ರಕಾರ ಆರ್‌ಟಿಒ ರಸ್ತೆ ತೆರಿಗೆಯನ್ನು ಹೊರತುಪಡಿಸಿ ಟ್ರಕ್‌ ಮಾಲೀಕನಿಗೆ ಸಾಮಾನ್ಯ ಅಪರಾಧಕ್ಕಾಗಿ 100 ರೂ., ಆದೇಶಗಳ ಅಸಹಕಾರ/ಅಡಚಣೆಗಾಗಿ 500 ರೂ., ವಾಯು ಮತ್ತು ಶಬ್ದ ಮಾಲಿನ್ಯದ ಉಲ್ಲಂಘನೆಗಾಗಿ 1000 ರೂ., ಗೂಡ್ಸ್‌ ವಾಹನದಲ್ಲಿ ಪ್ರಯಾಣಿಕರನ್ನು ಕರೆದೊಯ್ದಿದ್ದಕ್ಕಾಗಿ 5000 ರೂ., ಪರ್ಮಿಟ್‌ ಇಲ್ಲದೆಯೇ ಅಥವಾ ಪರವಾನಗಿ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ 5000 ರೂ. ಮತ್ತು ಇನ್ಶೂರೆನ್ಸ್‌ ಇಲ್ಲದಿದ್ದಕ್ಕಾಗಿ 1000 ರೂ. ದಂಡವನ್ನು ವಿಧಿಸಲಾಗಿದೆ. (ಏಜೆನ್ಸೀಸ್)

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...