More

    ಬೆಳಗಾವಿಯಲ್ಲಿ ವಿಶೇಷ ಅಧಿವೇಶನ ನಡೆಸಿ

    ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ, ಪ್ರವಾಹ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಸೇರಿದಂತೆ ಉತ್ತರ ಕರ್ನಾಟಕದ ಜನರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

    2019-20 ಮತ್ತು 2020-21ನೇ ಸಾಲಿನಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದಾಗಿ ಉತ್ತರ ಮತ್ತು ಮುಂಬೈ ಕರ್ನಾಟಕ ಭಾಗದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ, ಮನೆ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗಿದೆ. ಪರಿಣಾಮ ರೈತರು, ಕೂಲಿ ಕಾರ್ಮಿಕರು ಮತ್ತು ಬಡವರು ನಾನಾ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

    ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳು ಪ್ರತಿವರ್ಷ ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಇನ್ನಿತರ ಅನೇಕ ಸಮಸ್ಯೆ ಎದುರಿಸುತ್ತಿವೆ. ಆದರೆ, ಯಾವುದೇ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಯೋಜನೆ ರೂಪಿಸಲು ಮತ್ತು ಚರ್ಚಿಸಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ. ಕೂಡಲೇ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ಕರೆಯಬೇಕು. ಈ ಭಾಗದ ಜನರಿಗಿರುವ ಸಮಸ್ಯೆ ನೀಗಿಸಲು ಜನಪ್ರತಿನಿಧಿಗಳು ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಕನ್ನಡಪರ ಸಂಘಟನೆ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ಕನ್ನಡ ಒಕ್ಕೂಟದ ಮುಖಂಡ ಎಚ್.ಆರ್. ಪಾರ್ಥಸಾರಥಿ, ಜಯ ಕರ್ನಾಟಕ ವೇದಿಕೆ ಅಧ್ಯಕ್ಷ
    ಎನ್.ಸತೀಶ, ಗುಣಶೇಖ, ಬಾಲಾಜಿ ಕೃಷ್ಣಮೂರ್ತಿ, ರಾಜು ಕೆ. ಮತ್ತಿತರರು ಇದ್ದರು.

    ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ ವೃತ್ತಕ್ಕೆ ಯಾವುದೇ ಕಾರಣಕ್ಕೂ ‘ಶಿವಾಜಿ ವೃತ’್ತ ಎಂದು ನಾಮಕರಣ ಮಾಡಬಾರದು. ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು ಕನ್ನಡ ಭಾಷೆಯನ್ನು ಉಳಿಸಿ-ಬೆಳೆಸಲು ಮುಂದಾಗಬೇಕು.
    | ವಾಟಾಳ್ ನಾಗರಾಜ ಕನ್ನಡಪರ ಹೋರಾಟಗಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts