ನನ್ನ ಜೀವನ ನಾಯಿಗಿಂತಲೂ ಕಡೆಯಾಗಿತ್ತು! ಕೊನೆಗೂ ಡಿವೋರ್ಸ್​ಗೆ ಕಾರಣ ಬಿಚ್ಚಿಟ್ಟ ಜಯಂ ರವಿ Jayam Ravi Divorce

Jayam Ravi

ಚೆನ್ನೈ: ಕಾಲಿವುಡ್​ ಸೂಪರ್​ಸ್ಟಾರ್​ ಜಯಂ ರವಿ ( Jayam Ravi ) ವಿಚ್ಛೇದನಾ ( Divorce ) ಸುದ್ದಿ ತಮಿಳು ಚಿತ್ರರಂಗದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಮೊದಲು ಜಯಂ ರವಿ ಡಿವೋರ್ಸ್​ ಘೋಷಣೆ ಮಾಡಿದರು. ಇದರ ಬೆನ್ನಲ್ಲೇ ಅವರ ಪತ್ನಿ ಆರತಿ ( Aarthi ), ಇದು ಏಕಪಕ್ಷೀಯ ನಿರ್ಧಾರವಾಗಿದ್ದು, ನನಗೂ ಹಾಗೂ ನನ್ನ ಮಕ್ಕಳಿಗೂ ಅನ್ಯಾಯವಾಗಿದೆ ಎಂದು ಹೇಳಿದರು. ಹೀಗೆ ಆರೋಪ-ಪ್ರತ್ಯಾರೋಪ ಸರಣಿ ಮುಂದುವರಿದಿದ್ದು, ಇದೀಗ ಜಯಂ ರವಿ ಅವರು ಪತ್ನಿ ಆರತಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಜಯಂ ರವಿ ಅವರು ಡಿವೋರ್ಸ್​ಗೆ ಕಾರಣವನ್ನು ಬಿಚ್ಚಿಟ್ಟಿದ್ದಾರೆ. ನನ್ನ ನಿರ್ಧಾರಕ್ಕೆ ಮಾಜಿ ಪತ್ನಿ ಮತ್ತು ಅವರ ಕುಟುಂಬದ ಕೆಟ್ಟ ನಡವಳಿಕೆ ಕಾರಣವಾಗಿದೆ. ಸಿನಿ ಜೀವನದಲ್ಲಿ ಉತ್ತಂಗ ಸ್ಥಿತಿಯಲ್ಲಿದ್ದರೂ ನನಗೆ ನನ್ನದೇಯಾದ ಬ್ಯಾಂಕ್​ ಖಾತೆ ಇಲ್ಲ. ಹಣದ ವ್ಯವಹಾರವೆಲ್ಲವೂ ನನ್ನ ಪತ್ನಿಯ ನಿಯಂತ್ರಣದಲ್ಲಿತ್ತು. ಒಂದು ರೂಪಾಯಿಗೂ ಆರತಿ ಬಳಿ ಕೇಳಬೇಕಾಗಿತ್ತು ಎಂದು ಹೇಳಿದ್ದಾರೆ.

ಮಾತು ಮುಂದುವರಿಸಿದ ಜಯಂ ರವಿ, ಆರತಿ ತಾಯಿ ನಿರ್ಮಿಸಿದ ಸಿನಿಮಾದಲ್ಲಿ ನಾನು ನಟಿಸಿದೆ. ಆ ಸಿನಿಮಾ ಬಾಕ್ಸ್​ಆಫೀಸ್​ನಲ್ಲಿ ಗೆಲುವು ಕಾಣಲಿಲ್ಲ ಎಂದರು. ಇದರಿಂದ ನಾನು ಮಾನಸಿಕವಾಗಿ ಕುಗ್ಗಿದೆ. ಆದರೆ, ಆ ಸಿನಿಮಾ ಸೋಲಲಿಲ್ಲ ಮತ್ತು ಲಾಭ ಬಂದಿದೆ ಎಂಬುದು ಆನಂತರ ನನಗೆ ಮನವರಿಕೆಯಾಯಿತು. ಅವರು ನನ್ನನ್ನು ಮನೆಯ ಕೆಲಸದವರಿಗಿಂತಲೂ ತುಂಬಾ ಕೆಟ್ಟದಾಗಿ ನಡೆಸಿಕೊಂಡರು ಎಂದು ಜಯಂ ರವಿ ಆರೋಪ ಮಾಡಿದರು.

ಇದನ್ನೂ ಓದಿ: ಸಚಿನ್ ತೆಂಡುಲ್ಕರ್ ದಾಖಲೆ ಹಿಂದಿಕ್ಕಿದ ವಿರಾಟ್ ಕೊಹ್ಲಿ: ಈ ಸಾಧನೆ ಮಾಡಿದ ವಿಶ್ವದ 4ನೇ ಆಟಗಾರ

ನಾನು ಆರು ವರ್ಷಗಳ ಹಿಂದೆಯೇ ವಾಟ್ಸ್​ಆ್ಯಪ್​ ಬಳಸುವುದನ್ನು ನಿಲ್ಲಿಸಿದೆ. ಏಕೆಂದರೆ, ಆರತಿ ನಿರಂತರ ಕಣ್ಗಾವಲು ಇಟ್ಟಿದ್ದಳು. ಖಾಸಗಿ ಮೆಸೇಜ್​ಗಳ ಮೇಲೂ ಸಂದೇಹಪಟ್ಟು ಪ್ರಶ್ನಿಸುತ್ತಿದ್ದಳು. ಅಲ್ಲದೆ, ನನ್ನ ಸಾಮಾಜಿಕ ಜಾಲತಾಣ ಖಾತೆಗಳನ್ನು ಸಹ ತನ್ನ ಹಿಡಿತಕ್ಕೆ ತೆಗೆದುಕೊಂಡಳು. ಒಟ್ಟಾರೆ ನನ್ನನ್ನು ನಾಯಿಗಿಂತಲೂ ತುಂಬಾ ಕೆಟ್ಟದಾಗಿ ನಡೆಸಿಕೊಂಡರು. ಈ ಕಾರಣಕ್ಕೆ ನಾನು ಡಿವೋರ್ಸ್​ ನಿರ್ಧಾರ ತೆಗೆದುಕೊಂಡೆ ಎಂದು ಜಯಂ ರವಿ ಹೇಳಿದ್ದಾರೆ.

ವಿಚ್ಛೇದನ ಘೋಷಿಸಿದ ಬಳಿಕ ತನ್ನ ಹೆಂಡತಿಯಿಂದ ತನ್ನ ಇನ್​ಸ್ಟಾಗ್ರಾಂ ಖಾತೆಯನ್ನು ಜಯಂ ರವಿ ಮರಳಿ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಇದರ ನಡುವೆ ತನಗೆ ಸಂಬಂಧಿಸಿದ ವಸ್ತುಗಳನ್ನು ಪಡೆಯಲು ಜಯಂ ರವಿ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಜಯಂ ರವಿ ( Jayam Ravi ) ಪತ್ರದಲ್ಲೇನಿತ್ತು?

ಹೆಚ್ಚು ಯೋಚಿಸಿದ ನಂತರ ಆರತಿಯೊಂದಿಗೆ ನನ್ನ ವೈವಾಹಿಕ ಜೀವನದಿಂದ ದೂರವಿರಲು ನಾನು ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ಆತುರವಾಗಿ ತೆಗೆದುಕೊಂಡಿಲ್ಲ, ಕೆಲವು ಹಿತದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ. ಈ ಸಮಯದಲ್ಲಿ ನನ್ನ ಖಾಸಗಿತನ ಮತ್ತು ನನಗೆ ಹತ್ತಿರವಿರುವವರ ಗೌಪ್ಯತೆಯನ್ನು ಗೌರವಿಸಲು ನಾನು ಎಲ್ಲರಿಗೂ ವಿನಂತಿಸುತ್ತೇನೆ. ಈ ನಿರ್ಧಾರವು ನನ್ನ ಸ್ವಂತ ನಿರ್ಧಾರವಾಗಿದೆ ಮತ್ತು ಈ ವಿಷಯವು ನನ್ನ ವೈಯಕ್ತಿಕ ವಿಷಯವಾಗಿ ಉಳಿಯಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನನ್ನ ಅಭಿನಯದ ಮೂಲಕ ನನ್ನ ಅಭಿಮಾನಿಗಳು ಮತ್ತು ಜನರಲ್ಲಿ ಸಂತೋಷ ಮತ್ತು ತೃಪ್ತಿಯನ್ನು ತರುವುದು ನನ್ನ ಆದ್ಯತೆಯಾಗಿದೆ. ನಾನು ಎಂದೆಂದಿಗೂ ನಿಮ್ಮ ಜಯಂ ರವಿಯಾಗಿರಲು ಬಯಸುತ್ತೇನೆ. ನೀವು ನನಗೆ ನೀಡುತ್ತಿರುವ ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು ಎಂದು ಜಯಂ ರವಿ ಹೇಳಿದ್ದಾರೆ.

ಆರತಿ ಬರೆದ ಪತ್ರದಲ್ಲಿ ಏನಿತ್ತು?

ನನ್ನ ಗಮನಕ್ಕೆ ತರದೆ ಅಥವಾ ಒಪ್ಪಿಗೆಯಿಲ್ಲದೆ ನಮ್ಮ ವೈವಾಹಿಕ ಜೀವನದ ಬಗ್ಗೆ ಇತ್ತೀಚಿಗೆ ಹೊರಡಿಸಿದ ಸಾರ್ವಜನಿಕ ಪ್ರಕಟಣೆಯಿಂದ ನಾನು ಆಘಾತಕ್ಕೆ ತೀವ್ರ ಒಳಗಾಗಿದ್ದೇನೆ ಮತ್ತು ದುಃಖಿತಳಾಗಿದ್ದೇನೆ. 18 ವರ್ಷಗಳ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ತುಂಬಾ ಗೌರವಯುತವಾಗಿ ಮತ್ತು ಗೌಪ್ಯತೆಯಿಂದ ನಿರ್ವಹಿಸಬೇಕೆಂದು ನಾನು ನಂಬುತ್ತೇನೆ. ನಾನು ನನ್ನ ಪತಿಯೊಂದಿಗೆ ನೇರವಾಗಿ ಮಾತನಾಡಲು ಹಲವು ಬಾರಿ ಪ್ರಯತ್ನಿಸಿದೆ. ದುರದೃಷ್ಟವಶಾತ್, ನನಗೆ ಆ ಅವಕಾಶ ಸಿಗಲಿಲ್ಲ. ಇದೀಗ ಈ ಡಿಢೀರ್​ ಡಿವೋರ್ಸ್​ ಪ್ರಕಟಣೆಯಿಂದ ನನ್ನ ಮಕ್ಕಳು ಮತ್ತು ನಾನು ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ಮದುವೆಯನ್ನು ವಿಸರ್ಜಿಸುವ ಮತ್ತು ಪ್ರತ್ಯೇಕಗೊಳ್ಳುವ ನಿರ್ಧಾರವು ಸಂಪೂರ್ಣವಾಗಿ ಏಕಪಕ್ಷೀಯವಾಗಿದೆ. ಇದರಿಂದ ನಮ್ಮ ಕುಟುಂಬಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಈ ಘಟನೆಯು ನಮಗೆ ಅತೀವ ದುಃಖವನ್ನುಂಟುಮಾಡಿದ್ದರೂ, ನಾನು ಗೌರವದಿಂದ ವರ್ತಿಸಬೇಕೆಂದು ಭಾವಿಸುತ್ತೇನೆ. ಈ ಕಾರಣಕ್ಕೆ ನಾನು ಈವರೆಗೂ ಈ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿಲ್ಲ. ಇನ್ನು ಈ ಪ್ರಕರಣದಲ್ಲಿ ನನ್ನನ್ನು ದೂಷಿಸುವ ಮತ್ತು ನನ್ನ ಪಾತ್ರವನ್ನು ತಪ್ಪಾಗಿ ನಿರೂಪಿಸುವ ಸುದ್ದಿಯಿಂದ ನಾನು ತೀವ್ರವಾಗಿ ನೋಂದಿದ್ದೇನೆ. ತಾಯಿಯಾಗಿ ನನ್ನ ಮೊದಲ ಆದ್ಯತೆ ಯಾವಾಗಲೂ ನನ್ನ ಮಕ್ಕಳ ಯೋಗಕ್ಷೇಮವಾಗಿದೆ. ಈ ಘಟನೆ ನನ್ನ ಮಕ್ಕಳ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂದು ನಾನು ಹೆದರುತ್ತೇನೆ. ನಮ್ಮ ಮಕ್ಕಳ ಯೋಗಕ್ಷೇಮದ ಮೇಲೆ ನನ್ನ ಗಮನವಿದೆ ಮತ್ತು ಈ ಕಷ್ಟದ ಸಮಯದಲ್ಲಿ ನಾನು ಅವರನ್ನು ರಕ್ಷಿಸುತ್ತೇನೆ. ನಾನು ಪತ್ರಿಕೆಗಳು, ಮಾಧ್ಯಮಗಳು ಮತ್ತು ನಮ್ಮ ಆತ್ಮೀಯ ಅಭಿಮಾನಿಗಳಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ, ಏಕೆಂದರೆ, ಸಮಯಕ್ಕೆ ಸತ್ಯವು ಹೊರಬರುತ್ತದೆ ಎಂದು ನಾನು ಭಾವಿಸುತ್ತೇನೆ. ನಿಮ್ಮ ದಯೆ ಮತ್ತು ಪ್ರೀತಿ ನಮ್ಮ ಶಕ್ತಿ. ನಮ್ಮ ಜೀವನದ ಈ ಅಧ್ಯಾಯದಲ್ಲಿ ನಿಮ್ಮ ಗೌಪ್ಯತೆಯನ್ನು ಕೋರುತ್ತೇನೆ ಎಂದಿದ್ದಾರೆ.


ಇದನ್ನೂ ಓದಿ: ದುರಭ್ಯಾಸ ಬಿಡಿ ಹೃದಯ ಪವಿತ್ರವಾಗಿಸಿ   ಚಿತ್ರನಟಿ ಅದಿತಿ ಪ್ರಭುದೇವ ಅನಿಸಿಕೆ  ದಾವಣಗೆರೆಯಲ್ಲಿ ವಾಕಥಾನ್ ಕಳೆ

ಅಂದಹಾಗೆ ಜಯಂ ರವಿ ಅವರು 2009ರಲ್ಲಿ ಆರತಿಯನ್ನು ವಿವಾಹವಾದರು. ಆರತಿ, ತಮಿಳಿನ ಖ್ಯಾತ ನಿರ್ಮಾಪಕಿ ಸುಜಾತಾ ವಿಜಯ್ ಕುಮಾರ್ ಅವರ ಮಗಳು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಈ ಪೈಕಿ ಆರವ್ ಇತ್ತೀಚೆಗೆ ಟಿಕ್ ಟಿಕ್ ಟಿಕ್ ಚಿತ್ರದಲ್ಲಿ ನಟಿಸಿದ್ದರು. ರವಿ ಮತ್ತು ಆರತಿ ಜೋಡಿ ಕಾಲಿವುಡ್ ಇಂಡಸ್ಟ್ರಿಯಲ್ಲಿ ಮುದ್ದಾದ ಜೋಡಿ ಎಂದೇ ಹೆಸರುವಾಸಿಯಾಗಿತ್ತು. ಆದರೆ ಕೆಲವು ವರ್ಷಗಳಿಂದ ಭಿನ್ನಾಭಿಪ್ರಾಯಗಳಿದ್ದು, ಕೆಲ ದಿನಗಳಿಂದ ಇಬ್ಬರೂ ದೂರ ಉಳಿದಿದ್ದರು. ಇದೀಗ ಡಿವೋರ್ಸ್​ ಆಗಿರುವುದನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. (ಏಜೆನ್ಸೀಸ್​)

ಹೌದು ನನಗೆ ಜಯಂ ರವಿ ಜತೆ ಸಂಬಂಧ ಇದೆ ಆದ್ರೆ… ಮತ್ತೊಮ್ಮೆ ಗುಡುಗಿದ ಗಾಯಕಿ ಕೆನಿಶಾ | Jayam Ravi Divorce

Share This Article

ಬ್ರೆಡ್​​ ಇಲ್ಲದೆ ಮನೆಯಲ್ಲೇ ಮಾಡಿ ಸ್ಯಾಂಡ್ವಿಚ್​; ಇಲ್ಲಿದೆ ಸಿಂಪಲ್​ ವಿಧಾನ | Recipe

ತ್ವರಿತ ಉಪಹಾರಕ್ಕಾಗಿ ಸ್ಯಾಂಡ್ವಿಚ್ ಮಾಡುವುದು ಜನರ ಮೊದಲ ಆಯ್ಕೆಯಾಗಿದೆ. ಮಕ್ಕಳು ಟಿಫಿನ್ ಮುಗಿಸಿ ಅದೇ ಟಿಫಿನ್…

ಒಣದ್ರಾಕ್ಷಿಯಿಂದಾಗುವ ಆರೋಗ್ಯ ಪ್ರಯೋಜನ ಗೊತ್ತಿದೆ; ಮನೆಯಲ್ಲೇ Dry Grapes ತಯಾರಿಸುವ ವಿಧಾನ ಇಲ್ಲಿದೆ | Recipe

ಒಣದ್ರಾಕ್ಷಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಆದರೆ ಒಣದ್ರಾಕ್ಷಿಯಲ್ಲಿ ಯಾವುದೇ ಕಲಬೆರಕೆ ಇಲ್ಲಿದಿದ್ದಾಗ ಮಾತ್ರ ಈ ಪ್ರಯೋಜನ…

ಬಹಳ ಇಷ್ಟಪಟ್ಟು ಪನೀರ್​ ಸೇವಿಸುತ್ತಿದ್ದೀರಾ; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ವಿಷಯ ಇದು.. | Health Tips

ನಾನ್​ವೆಜ್​​​​​​ ಇಷ್ಟಪಡದವರು ಪ್ರೋಟೀನ್​ಗಾಗಿ ಪನೀರ್​​​​ ಅನ್ನು ಹೆಚ್ಚು ಸೇವಿಸುತ್ತಾರೆ. ಆದರೆ ಇದು ನಿಜವಾಗಿಯೂ ಪ್ರೋಟೀನ್‌ಗೆ ಉತ್ತಮವಾದ…