Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟಿದ್ದ ಇಬ್ಬರು ಮಕ್ಕಳಲ್ಲಿ ಕಿರುನಾಲಿಗೆಯೇ ಇಲ್ಲ

Friday, 15.06.2018, 8:57 AM       No Comments

ಕಲಬುರಗಿ: ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಐವರು ಮಕ್ಕಳಲ್ಲಿ ಇಬ್ಬರಿಗೆ ಕಿರುನಾಲಿಗೆ ಕಟ್​ ಆಗಿರುವ ಅಂಶ ಬೆಳಕಿಗೆ ಬಂದಿದೆ. ಸದ್ಯ ಈ ಇಬ್ಬರನ್ನೂ ತುರ್ತು ನಿಗಾ ಘಟಕದಲ್ಲಿ ಇಡಲಾಗಿದೆ.

ಜೂ.8ರಂದು ಜಿಲ್ಲೆಯ ಕೆಲವು ಕಡೆ ಭಿಕ್ಷಾಟನೆಯಲ್ಲಿ ತೊಡಗಿದ್ದ ಐವರು ಅಪೌಷ್ಟಿಕ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಕ್ಷಣೆ ಮಾಡಿ, ಉತ್ತರ ಪ್ರದೇಶದ ರೂಬಿ, ರೈಯಿಸಾ ಬೇಗಂ ಎಂಬುವರನ್ನು ಬಂಧಿಸಲಾಗಿತ್ತು. ರಕ್ಷಣೆ ಮಾಡಿದ ಮಕ್ಕಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅವರು ತೀವ್ರ ಅಪೌಷ್ಟಿಕತೆಯಿಂದ ಕೂಡಿದ್ದಲ್ಲದೆ, ಇಬ್ಬರಲ್ಲಿ ಕಿರುನಾಲಿಗೆ ಕಟ್​ ಆಗಿದೆ ಎಂಬುದು ತಿಳಿದುಬಂದಿದೆ.

ತೀವ್ರ ಅಪೌಷ್ಟಿಕರಾಗಿರುವ ಇಬ್ಬರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಕಿರುನಾಲಿಗೆ ಇಲ್ಲದ ಮಕ್ಕಳನ್ನು ತುರ್ತು ನಿಗಾ ಘಟಕದಲ್ಲಿ ಇಡಲಾಗಿದೆ.

Leave a Reply

Your email address will not be published. Required fields are marked *

Back To Top