ಮೈಸೂರು ವಿಭಾಗ ಮಟ್ಟದ ಬಾಲ್​ಬ್ಯಾಡ್ಮಿಂಟನ್​ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ ಚಾಂಪಿಯನ್

ಬೀರೂರು: ಮೈಸೂರು ವಿಭಾಗ ಮಟ್ಟದ ಪ್ರೌಢಶಾಲೆಗಳ 17 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಬಾಲಕಿಯರ ವಿಭಾಗದಲ್ಲಿ ಹಾಸನ ಜಿಲ್ಲೆಯ ತಂಡಗಳು ಗೆಲುವು ಸಾಧಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದವು.

ಜೋಡಿತಿಮ್ಮಾಪುರದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆದ ಬಾಲಕರ ವಿಭಾಗದ ಫೈನಲ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ ಹಾಸನ ತಂಡವನ್ನು ಸೋಲಿಸಿ ಗೆಲುವಿನ ನಗೆ ಬೀರಿತು.

ಬಾಲಕಿಯರ ವಿಭಾಗದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಹಾಸನ ತಂಡ ಮೈಸೂರು ತಂಡದ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಯಿತು. ಮೈಸೂರಿನ ರಿಶಾನಾ ಬೇಗಂ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ಪಡೆದರು.

ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ, ದಕ್ಷಿಣಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಬಾಲಕ, ಬಾಲಕಿಯರ ತಂಡಗಳು ಭಾಗವಹಿಸಿದ್ದವು.

Leave a Reply

Your email address will not be published. Required fields are marked *