ದರೋಡೆ ಆರೋಪಿಗಳ ಸೆರೆ

Latest News

ಅನಾಮಧೇಯ ಕರೆಯಿಂದ ನಿಂತ ಮದುವೆ; ಬೇರೊಬ್ಬ ಹುಡುಗನ ಜತೆ ನಿಶ್ಚಯ

ರಾಮನಗರ: ವಧುವಿಗೆ ಬಂದ ಅನಾಮಧೇಯ ಪೋನ್​ಕಾಲ್​ನಿಂದ ಮುರಿದು ಬಿದ್ದ ಮದುವೆ, ಬೇರೊಬ್ಬ ಹುಡುಗನ ಜತೆ ನಿಶ್ಚಯವಾಗುವ ಮೂಲಕ ಸುಖಾಂತ್ಯಗೊಂಡಿದೆ. ಮದುವೆ ನಿಶ್ಚಯವಾಗಿದ್ದ ಗಂಡಿಗೆ ಮೊದಲೇ...

ಮೈದಾನ ಯಾವುದೇ ಇರಲಿ, ಬಾಲ್ ಯಾವುದೇ ಆಗಲಿ​ ಶಮಿ ತುಂಬಾ ಡೇಂಜರಸ್​ ಎಂದ ಆಟಗಾರನ್ಯಾರು?

ಕೋಲ್ಕತ: ಮೊದಲ ಬಾರಿಗೆ ಅಹರ್ನಿಶಿ ಟೆಸ್ಟ್​ ಪಂದ್ಯವನ್ನಾಡಲು ಟೀಮ್​​ ಇಂಡಿಯಾ ತುದಿಗಾಲಲ್ಲಿ ನಿಂತಿದೆ. ಇಂದು ಆರಂಭವಾಗಲಿರುವ ಪಂದ್ಯಕ್ಕೆ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ. ಇದರ...

ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ: ಸ್ಥಳೀಯ ಪೊಲೀಸರಿಗೆ ಕೇಂದ್ರ ಗುಪ್ತದಳ ಸಾಥ್​

ಮೈಸೂರು: ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ದಿನದಿನಕ್ಕೂ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊಲೆ ಪ್ರಕರಣ ಸಂಬಂಧ ಮೈಸೂರು ಪೊಲೀಸರ ತನಿಖೆಗೆ...

ನನಗೆ ಮೋಸ ಮಾಡಿದಳು ಅವಳಿಗೆ ಶಿಕ್ಷೆ ಆಗಲೇಬೇಕೆಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ!

ಚಿಕ್ಕಮಗಳೂರು: ಪ್ರೇಯಸಿ ಕೈಕೊಟ್ಟಳೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳಸ ಸಮೀಪದ ಹಿರೇಬೈಲ್ ಗ್ರಾಮದಲ್ಲಿ ನಡೆದಿದೆ. ಸತೀಶ್ ಮೃತ ಯುವಕ. ಈತ ಕಳಸ...

ತಡರಾತ್ರಿ ಮಗನೊಂದಿಗೆ ಶರಾದ್​ ಪವಾರ್​ ಮನೆಗೆ ಧಾವಿಸಿದ ಉದ್ಧವ್​ ಠಾಕ್ರೆ: ಕುತೂಹಲ ಮೂಡಿಸಿದ ನಾಯಕರ ಭೇಟಿ!

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಇಂದು ಅಂತ್ಯಕಾಣುವ ಲಕ್ಷಣಗಳು ಕಾಣಿಸುತ್ತಿವೆ. ಶಿವಸೇನಾ ಜತೆ ಕಾಂಗ್ರೆಸ್​ ಮತ್ತು ಎನ್​ಸಿಪಿ ಮೈತ್ರಿ ಮಾಡಿಕೊಳ್ಳಲು ಕೆಲವು ಷರತ್ತುಗಳೊಂದಿಗೆ...

«16.57 ಲಕ್ಷ ರೂ. ನಗದು, ಬೈಕ್ ವಶ * ರೌಡಿ ನಿಗ್ರಹದಳ ಕಾರ್ಯಾಚರಣೆ»

ವಿಜಯವಾಣಿ ಸುದ್ದಿಜಾಲ ಮಂಗಳೂರು
ನಗರದ ಬಿಜೈ ಶ್ರೀರಾಮ ಭಜನಾ ಮಂದಿರ ರಸ್ತೆ ಮೂಲಕ ಮನೆಗೆ ಹೋಗುತ್ತಿದ್ದ ಹಿರಿಯ ನಾಗರಿಕರೊಬ್ಬರಿಗೆ ಹಲ್ಲೆಗೈದು 27 ಲಕ್ಷ ರೂ. ದರೋಡೆಗೈದ ಇಬ್ಬರು ಆರೋಪಿಗಳನ್ನು ಕೇಂದ್ರ ಉಪವಿಭಾಗ ರೌಡಿ ನಿಗ್ರಹದಳ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ಇಳಂತಿಲ ನಿವಾಸಿ ಮಹಮ್ಮದ್ ಶಾಫಿ(26), ಇಳಂತಿಲ ನೆಜಿಕಾರ್ ನಿವಾಸಿ ಮಹಮ್ಮದ್ ರಿಯಾಜ್(19) ಬಂಧಿತರು. ಆರೋಪಿಗಳಿಂದ 16.57 ಲಕ್ಷ ರೂ. ನಗದು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಬೈಕ್ ಸೇರಿದಂತೆ ಒಟ್ಟು 17.17 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಅ.20ರಂದು ರಾತ್ರಿ 7.30ರ ವೇಳೆಗೆ ಗಣೇಶ್ ಕಾಮತ್(64) ಎಂಬುವರನ್ನು ದೂಡಿ ಹಾಕಿ ಹಲ್ಲೆಗೈದು, ಅವರ ಕೈಯಲ್ಲಿದ್ದ 27 ಲಕ್ಷ ರೂ. ಹಣವಿದ್ದ ಚೀಲವನ್ನು ದರೋಡೆ ಮಾಡಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಡಿಸಿಪಿಗಳಾದ ಹನುಮಂತರಾಯ, ಉಮಾಪ್ರಶಾಂತ್, ಎಸಿಪಿ ಭಾಸ್ಕರ್ ಒಕ್ಕಲಿಗೆ ಮಾರ್ಗದರ್ಶನದಂತೆ ಕೇಂದ್ರ ಉಪ ವಿಭಾಗ ರೌಡಿ ನಿಗ್ರಹದಳ ಪೊಲೀಸ್ ನಿರೀಕ್ಷಕ ರವೀಶ್ ಎಸ್.ನಾಯಕ್, ಎಸ್‌ಐ ಪ್ರದೀಪ್ ಟಿ.ಆರ್ ಹಾಗೂ ಸಿಬ್ಬಂದಿ ವೆಲೆಸ್ಟೀನ್ ಜಾರ್ಜ್ ಡಿಸೋಜ, ಗಂಗಾಧರ ಎನ್., ಸಂತೋಷ್ ಸಸಿಹಿತ್ಲು, ಕಿಶೋರ್ ಕೋಟ್ಯಾನ್, ಪ್ರಮೋದ್ ಮೇರಿಹಿಲ್, ನಾಗರಾಜ ಚಂದರಗಿ, ಬಸವರಾಜ ನಾಯ್ಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಶಾಫಿ ವಿರುದ್ಧ 10ಕ್ಕೂ ಅಧಿಕ ಪ್ರಕರಣ: ದರೋಡೆ ಪ್ರಕರಣದ ರೂವಾರಿ ಮಹಮ್ಮದ್ ಶಾಫಿ ಮೇಲೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ 4 ಮನೆ ಕಳವು, ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರ, ನಗರದ ಪಾಂಡೇಶ್ವರ, ಉರ್ವ, ಕದ್ರಿ, ಕಾವೂರು ಠಾಣೆಗಳಲ್ಲೂ ಪ್ರಕರಣಗಳಿವೆ. ಜಾತ್ರೆಗಳಲ್ಲಿ ಚರುಂಬುರಿ ಮಾರಿ ಜೀವನ ಸಾಗಿಸುತ್ತಿದ್ದ ಈತ ಬಳಿಕ ಕಳ್ಳತನ, ದರೋಡೆ ಕೃತ್ಯ ಎಸಗುತ್ತಿದ್ದ. ಶಾಫಿ ಜತೆ ದರೋಡೆ ಕೃತ್ಯದಲ್ಲಿ ತೊಡಗಿದ್ದ ರಿಯಾಜ್ ಟಿಂಬರ್ ಕೆಲಸ ಮಾಡಿಕೊಂಡಿದ್ದು, ಸಣ್ಣಪುಟ್ಟ ಪ್ರಕರಣದಲ್ಲಿ ಶಾಫಿಗೆ ನೆರವಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮುಚ್ಚಿಹೋಗುತ್ತಿದ್ದ ಪ್ರಕರಣ: ಆರೋಪಿಗಳು ಗಣೇಶ್ ಕಾಮತ್ ಅವರಿಗೆ ಹಲ್ಲೆ ನಡೆಸಿ ದರೋಡೆ ಮಾಡಿದ್ದಲ್ಲದೆ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದರು. ಈ ಕಾರಣದಿಂದ ಕಾಮತ್ ಅವರು ದರೋಡೆಯ ನೈಜ ಘಟನೆಯನ್ನು ಮುಚ್ಚಿಟ್ಟು ಅಪಘಾತ ಎಂದು ಹೇಳುತ್ತಿದ್ದರು. ಆದರೆ ಬಳಿಕ ನೈಜ ವಿಷಯ ಗೊತ್ತಾಗಿ, ಮುಚ್ಚಿ ಹೋಗುತ್ತಿದ್ದ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಪ್ರಕರಣವನ್ನು ಸೂಕ್ಷ್ಮವಾಗಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Stay connected

278,656FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...