ಕೃಷಿ ಕ್ಷೇತ್ರದಲ್ಲಿ ಸ್ವಾವಲಂಬನೆ ಅಗತ್ಯ : ಎ.ಎನ್.ಶಂಸೀರ್ ಅನಿಸಿಕೆ

New Project (31)
Published on

ಕಾಸರಗೋಡು: ಕೃಷಿ ಕ್ಷೇತ್ರದ ವಿವಿಧ ವಲಯಗಳಲ್ಲಿ ಇನ್ನೂ ಹೆಚ್ಚಿನ ಸ್ವಾವಲಂಬನೆ ಸಾಧಿಸಬೇಕಾದ ಅಗತ್ಯವಿದೆ ಎಂಬುವುದಾಗಿ ಕೇರಳ ವಿಧಾನಸಭಾ ಸ್ಪೀಕರ್ ಎ.ಎನ್.ಶಂಸೀರ್ ತಿಳಿಸಿದರು.

ಪಳ್ಳಿಕೆರೆಯಲ್ಲಿ ಕಾಞಂಗಾಡು ಬ್ಲಾಕ್ ಪಂಚಾಯಿತಿ ಆಯೋಜಿಸಿದ್ದ ಬೇಕಲ್ ಆಗ್ರೋ ಕಾರ್ನಿವಲ್ ಉದ್ಘಾಟಿಸಿ ಮಾತನಾಡಿದರು.

ಯುವ ಜನತೆಯನ್ನು ಕೃಷಿಯತ್ತ ಆಕರ್ಷಿಸಲು ಇಂತಹ ಕೃಷಿ ಮೇಳಗಳು ಸಹಕಾರಿ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಯುವ ಪೀಳಿಗೆಯನ್ನು ತೊಡಗಿಸಿಕೊಳ್ಳುವುದು ಇಂದಿನ ಅನಿವಾರ್ಯತೆಯಾಗಿದೆ ಎಂದರು.

ಶಾಸಕ ಸಿ.ಎಚ್.ಕುಂಜಂಬು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು. ಕಾಞಂಗಾಡು ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಕೆ.ಮಣಿಕಂಠನ್, ಉಪಾಧ್ಯಕ್ಷೆ ಕೆ.ವಿ.ಶ್ರೀಲತಾ, ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ಲಕ್ಷ್ಮೀ, ಎಂ.ಕುಮಾರನ್, ಟಿ.ಶೋಭಾ, ಮಾಜಿ ಶಾಸಕ ಕೆ.ವಿ.ಕುಞಿರಾಮನ್, ಬ್ಲಾಕ್ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರು, ವಿವಿಧ ಇಲಾಖಾಧಿಕಾರಿಗಳು, ಬ್ಲಾಕ್ ಪಂಚಾಯಿತಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net