More

    ಬೆಳಗಾವಿಯಲ್ಲಿ ಮತ್ತೆ ಬಾಲ ಬಿಚ್ಚಿದ ಶಿವಸೇನೆ

    ಬೆಳಗಾವಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಒಂದಿಲ್ಲೊಂದು ಕ್ಯಾತೆ ತೆಗೆಯುತ್ತ ಬೆಳಗಾವಿಯಲ್ಲಿ ತನ್ನ ರಾಜಕೀಯ ಅಸ್ತಿತ್ವ ಕಾಪಾಡಿಕೊಳ್ಳಲು ಹವಣಿಸುತ್ತಿರುವ ಶಿವಸೇನೆ ಸೋಮವಾರ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದೆ. ನಗರದ ರಾಮಲಿಂಗಖಿಂಡ್ ಗಲ್ಲಿಯ ಅಶೋಕ ಚೌಕ್‌ನಲ್ಲಿ ಆಯೋಜಿಸಿದ್ದ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಶಿವಸೇನೆ ಕಾರ್ಯಕರ್ತರು ನಾಡವಿರೋಧಿ ೋಷಣೆ ಕೂಗಿ, ಗಡಿ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ.

    ಏಕೀಕರಣ ಹೋರಾಟದಲ್ಲಿ ಮಡಿದ ಹುತಾತ್ಮರು ಅಮರ್ ರಹೇ ಎಂದ ಕಾರ್ಯಕರ್ತರು, ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ೋಷಣೆ ಕೂಗಿದ್ದಾರೆ. ಮಾಜಿ ಶಾಸಕ ಮನೋಹರ ಕಿಣೇಕರ ಮಾತನಾಡಿ, ಮಹಾರಾಷ್ಟ್ರಕ್ಕೆ ಸೇರುವ ಸಲುವಾಗಿ ಮರಾಠಿ ಭಾಷಿಕರು ಸಂಘಟಿತರಾಗಬೇಕು. ಯಾವುದೇ ಪಕ್ಷದಲ್ಲಿದ್ದರೂ ಭಾಷೆ ಮತ್ತು ಸಂಸ್ಕೃತಿ ವಿಷಯ ಬಂದಾಗ ಎಲ್ಲರೂ ಒಂದಾಗಿ ಚುನಾವಣೆ ಎದುರಿಸಬೇಕು.

    ಶಿವಸೇನೆಯನ್ನು ಬೆಂಬಲಿಸಬೇಕು. ಆಗ, ಹುತಾತ್ಮರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದರು.
    ಮರಾಠಿ ಭಾಷಿಕ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಸಿಎಂ ಉದ್ಧವ್ ಠಾಕ್ರೆ ಹೇಳಿರುವುದರಲ್ಲಿ ತಪ್ಪೇನಿಲ್ಲ. ಮರಾಠಿ ಭಾಷಿಕರನ್ನು ಒಗ್ಗೂಡಿಸಿ ಚುನಾವಣೆ ಎದುರಿಸಲು ನಾವು ಸಜ್ಜಾಗುತ್ತಿದ್ದೇವೆ ಎಂದು ತಿಳಿಸಿದರು. ಮಾಜಿ ಶಾಸಕ ದಿಗಂಬರ ಪಾಟೀಲ, ಪ್ರಕಾಶ ಶಿರೋಳಕರ, ಮದನ ಭಾಮನೆ, ಅರವಿಂದ ನಾಗನೂರಿ, ದತ್ತಾ ಜಾಧವ, ಮಾಲೋಜಿ ಅಷ್ಟೇಕರ ಇದ್ದರು.

    ಬೆಳಗಾವಿ ಲೋಕಸಭೆ ಉಪಚುನಾವಣೆ, ಪಾಲಿಕೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಶಿವಸೇನೆ, ಎಂಇಎಸ್ ಕಾರ್ಯಕರ್ತರು ಪ್ರಚೋದನಾತ್ಮಕ ಹೇಳಿಕೆ ನೀಡಿ ಶಾಂತಿ ಕದಡುತ್ತಿದ್ದಾರೆ. ಹುತಾತ್ಮ ದಿನ ಕಾರ್ಯಕ್ರಮದಲ್ಲಿ ನಾಡವಿರೋಧಿ ಹೇಳಿಕೆ ನೀಡಿ, ಶಿವಸೇನೆ ಮತ್ತೊಮ್ಮೆ ಪುಂಡಾಟಿಕೆ ಮೆರೆದಿದೆ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಎಂಇಎಸ್, ಶಿವಸೇನೆ ನಿಷೇಧಕ್ಕೆ ಕ್ರಮ ಕೈಗೊಳ್ಳಬೇಕು.
    | ದೀಪಕ ಗುಡಗನಟ್ಟಿ, ಕರವೇ ಜಿಲ್ಲಾಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts