17.8 C
Bengaluru
Wednesday, January 22, 2020

ಅಧಿವೇಶನದಲ್ಲಿ ಹೋರಾಟದ ಎಚ್ಚರಿಕೆ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಬೆಂಗಳೂರು: ಅವರ ಸರ್ಕಾರದ ಅವಧಿಯಲ್ಲಿ 35 ಸಾವಿರ ಕೋಟಿ ರೂ. ದುರ್ಬಳಕೆಯಾಗಿದೆ ಎಂದು ಸಿಎಜಿ ವರದಿಯನ್ನು ಜನರ ಎದುರು ಬಿಜೆಪಿ ಇಟ್ಟರೆ, ನಾನೇನು ಜೈಲಿಗೆ ಹೋಗಿಲ್ಲವೆಂಬ ಹೇಳಿಕೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ನೀಡುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಎಸ್​ವೈ, ಮಾಜಿ ಸಿಎಂ ಆಗಿ ಮಾಜಿ ಹಣಕಾಸು ಸಚಿವರಾಗಿ ವಾಸ್ತವವನ್ನು ಜನರ ಮುಂದಿಡುವ ಬದಲು ಈ ರೀತಿ ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರಿಂದ ನಾನು ಪಾಠ ಕಲಿಯಬೇಕಿಲ್ಲ. ಕಾಂಗ್ರೆಸ್​ನ ಯಾರ ಮೇಲೆ ಆರೋಪ ಬಂದರೂ ನನ್ನ ಮೇಲೆ ಬೊಟ್ಟು ಮಾಡಿ ತೋರಿಸುವುದು ವಾಡಿಕೆಯಾಗಿದೆ. ಕಾನೂನು ಓದಿಕೊಂಡವರೇ ಈ ರೀತಿ ಅಸಂಬದ್ಧ ಹೇಳಿಕೆ ನೀಡಿದರೆ ಇನ್ನು ಸಾಮಾನ್ಯ ಜನರ ಗತಿಯೇನು ಎಂದು ಪ್ರಶ್ನಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಪ್ರತಿಪಕ್ಷದಿಂದ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಸಿಗುತ್ತದೆ. ಆದರೆ ಸರಿಯಾಗಿ ಉತ್ತರ ಕೊಡದೆ ಉಡಾಫೆ ಮಾಡಿದರೆ ಹೋರಾಟ ಮುಂದುವರಿಯುತ್ತದೆ. ಸಾಲಮನ್ನಾ ವಿಚಾರದಲ್ಲಿ ಸಿಎಂ ಶೋ ಕೊಡುತ್ತಾ ಓಡಾಡುತ್ತಿದ್ದಾರೆ ಎಂದರು. ಡಿಸೆಂಬರ್​ನಲ್ಲಿ ಸರ್ಕಾರದಲ್ಲಿ ಧಮಾಕಾ ಆಗುತ್ತದೆ ಎಂಬ ಪ್ರಕಾಶ್ ಜಾವಡೇಕರ್ ಹೇಳಿಕೆ ಕುರಿತು

ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಯಡಿಯೂರಪ್ಪ, ನಾವು ಸರ್ಕಾರ ಬೀಳಿಸುವ ಪ್ರಯತ್ನ ಮಾಡುವುದಿಲ್ಲ. ಅವರೇ ಬಡಿದಾಡಿಕೊಂಡು ಬಿದ್ದರೆ ನಾವು ಹೊಣೆಯಲ್ಲ. ಅನವಶ್ಯಕವಾಗಿ ನಮ್ಮ ಹೆಸರು ತರುತ್ತಾರೆ. ಅವರ ಶಾಸಕರನ್ನು ಮೊದಲು ಹಿಡಿತದಲ್ಲಿ ಇಟ್ಟುಕೊಳ್ಳಲಿ ಎಂದು ತಿಳಿಸಿದರು.

ಉ.ಕ. ಬಗ್ಗೆ ಸಿಎಂ ಅಸಡ್ಡೆ: ಉತ್ತರ ಕರ್ನಾಟಕದ ಬಗ್ಗೆ ಇರುವ ಮಲತಾಯಿ ಧೋರಣೆ ಮತ್ತು ಅಸಡ್ಡೆತನದ ಬಗ್ಗೆ ಹೆಚ್ಚು ರ್ಚಚಿಸುವುದು ಅನವಶ್ಯಕ ಅನಿಸುತ್ತದೆ ಎಂದು ಸಿಎಂ ಕುಮಾರಸ್ವಾಮಿ ಬಗ್ಗೆ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ತುಮಕೂರಿನ ಸಿದ್ಧಗಂಗಾ ಶ್ರೀಗಳನ್ನು ಭೇಟಿಯಾಗಿ ಬಂದಿದ್ದೀನೆ. ವಚನ ಹೇಳಿ, ತಮ್ಮ ವಯಸ್ಸನ್ನೂ ಹೇಳಿದ್ದಾರೆ. ಚೆನ್ನೈನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಪಡೆದು ಇನ್ನೂ ಹತ್ತಾರು ವರ್ಷ ಶ್ರೀಗಳು ನಮಗೆ ಆಶೀರ್ವಾದ ಮಾಡಲಿದ್ದಾರೆ.

| ಬಿ.ಎಸ್.ಯಡಿಯೂರಪ್ಪ ಮಾಜಿ ಸಿಎಂ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...