23.2 C
Bangalore
Saturday, December 14, 2019

ಬೆಳಗಾವಿ ಜಿಲ್ಲೆ ವಿಭಜನೆ ಸದ್ಯಕ್ಕಿಲ್ಲ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು , ಜಿಲ್ಲಾ ವಿಭಜನೆ ಸದ್ಯಕ್ಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ, ಲೋಕಸಭೆ ಚುನಾವಣೆ ಪ್ರಣಾಳಿಕೆ, ಸ್ಪರ್ಧೆ, ಹೊಂದಾಣಿಕೆ ಈ ಯಾವುದರ ಕುರಿತು ಇನ್ನೂ ಸ್ಪಷ್ಟ ಚಿತ್ರ ಇಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದರು.

ಬೆಳಗಾವಿ ಜಿಲ್ಲೆ ವಿಭಜನೆಗೂ ಮೊದಲು ತಾಲೂಕುಗಳ ಮರುರಚನೆಯಾಗಬೇಕು.ರಚನೆಯಾಗಿರುವ ಹೊಸ ತಾಲೂಕುಗಳಿಗೆ ಮಾನವ ಸಂಪನ್ಮೂಲ, ಮೂಲ ಸೌಕರ್ಯ ಒದಗಿಸಬೇಕು, ಕೌಜಲಗಿ, ಯರಗಟ್ಟಿ ಮತ್ತು ಇನ್ನಷ್ಟು ಹೊಸ ತಾಲೂಕು ರಚಿಸಿ ಜಿಲ್ಲಾ ವಿಭಜನೆ ಕೈಗೊಳ್ಳುವುದು ಅಗತ್ಯವಾಗಿದೆ.

ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲೆಗೆ ಬೇಡಿಕೆ ಇದೆ. ಜಿಲ್ಲೆ ವಿಭಜಿಸಿದರೆ ಎಷ್ಟು ಜಿಲ್ಲೆ ರಚನೆಯಾಗಬೇಕು ಎಂಬುದು ನಿರ್ಧಾರವಾಗಿಲ್ಲ. ಜಿಲ್ಲೆ ರಚನೆ ನಿರ್ಧಾರ ಸದ್ಯಕ್ಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕೆರೆ ತುಂಬಿಸಲು ಡಾ.ಕೋರೆ ಮನವಿ

ರಾಯಬಾಗ ಹಾಗೂ ಚಿಕ್ಕೋಡಿ ತಾಲೂಕಿನ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಜನ-ಜಾನುವಾರು ನೀರಿಗಾಗಿ ಪರಿತಪಿಸುತ್ತಿದ್ದಾರೆ. ಆದಷ್ಟು ಬೇಗನೆ ಕೆರೆ ತುಂಬಿಸುವ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ರಾಜ್ಯ ಸಭೆ ಸದಸ್ಯ ಡಾ.ಪ್ರಭಾಕರ ಕೋರೆ ಅವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಒತ್ತಾಯಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಬೆಳಗ್ಗೆ ಕುಡಿವ ನೀರಿನ ಸಮಸ್ಯೆಯ ಬಗ್ಗೆ ಸಚಿವರ ಗಮನ ಸೆಳೆದರು.
ಸಮಸ್ಯೆ ಎದುರಿಸುತ್ತಿರುವ ಚಿಕ್ಕೋಡಿ, ರಾಯಬಾಗ ತಾಲೂಕಿನ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಲು ಕೆರೆ ತುಂಬಿಸುವ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.

ಕೂಡಲೇ ಅಧಿಕಾರಿಗಳ ಸಭೆ ಕರೆದು ಸಂಬಂಧಿಸಿದ ಸಮಸ್ಯೆಯನ್ನು ನಿವಾರಿಸಲು ಕಟ್ಟು ನಿಟ್ಟಿನ ಸೂಚನೆ ನೀಡಲಾಗುವುದು ಎಂದು ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...