ಕಿಕ್ಕಿರಿದ ಬಸ್​ನಲ್ಲಿ ಸಿಲುಕಿ ಉಸಿರುಗಟ್ಟಿ ವಿದ್ಯಾರ್ಥಿನಿಯರು ಅಸ್ವಸ್ಥ: ಸಾರಿಗೆ ಸಚಿವರ ತವರಲ್ಲೇ ಘಟನೆ!

Girls
Published on

ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರಿನಲ್ಲೇ ವಿದ್ಯಾರ್ಥಿಗಳು ಬಸ್​ಗಾಗಿ ಪರದಾಡುವಂತಾಗಿದೆ. ಸರಿಯಾದ ಸಮಯಕ್ಕೆ ಬಸ್​ ಇಲ್ಲದೆ, ಶಾಲಾ-ಕಾಲೇಜಿಗೆ ತೆರಳಲು ಖಾನಾಪುರ ತಾಲೂಕಿನ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

ಇಷ್ಟೇ ಅಲ್ಲದೆ, ಬಸ್ಸಿನ ಕೊರತೆಯಿಂದಾಗಿ ಸದ್ಯ ಇರುವ ಬಸ್​ನಲ್ಲಿ ವಿದ್ಯಾರ್ಥಿಗಳನ್ನು ಕುರಿ ತುಂಬಿದ ಹಾಗೇ ತುಂಬಿ ಕರೆದೊಯ್ಯುತ್ತಿದ್ದಾರೆ. ಇದರ ಪರಿಣಾಮ ಇಂದು ಕಿಕ್ಕಿರಿದ ಬಸ್​ನಲ್ಲಿ ಪ್ರಯಾಣಿಕರ ಮಧ್ಯೆ ಸಿಲುಕಿ ಉಸಿರುಗಟ್ಟಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿಷಯ ತಿಳಿದ ವಿದ್ಯಾರ್ಥಿಗಳ ಪಾಲಕರು ಹಾಗೂ ವಿದ್ಯಾರ್ಥಿಗಳು ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಮರ್ಪಕವಾಗಿ ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ವಿದ್ಯಾರ್ಥಿಗಳ ಆಗ್ರಹಿಸಿದ್ದಾರೆ. ಬೆಳಗ್ಗೆ 7-8 ಕ್ಕೆ ರಾಮನಗರ - ಖಾನಾಪೂರ ಮತ್ತು ಮಧ್ಯಾಹ್ನ 2-3 ಕ್ಕೆ ಖಾನಾಪೂರ - ರಾಮನಗರ ಬಸ್ ಬಿಡಲು ಆಗ್ರಹಿಸಿದ್ದಾರೆ. (ದಿಗ್ವಿಜಯ ನ್ಯೂಸ್​) ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net