ಗಾಂಜಾ ಮಾರುತ್ತಿದ್ದ ವ್ಯಕ್ತಿಗೆ 7 ವರ್ಷ ಕಠಿಣ ಶಿಕ್ಷೆ

ಬೆಳಗಾವಿ: ಬಸ್‌ಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಕರಣದ ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಪ್ಪಿತಸ್ಥನಿಗೆ 7 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ.

ನಗರದ ಬಾಪಟಗಲ್ಲಿ ನಿವಾಸಿ ಮನೋಜ್ ಮಹೇಶ ರಾವುತ್(21) ಶಿಕ್ಷೆಗೆ ಒಳಗಾದವ. ಯರಗಟ್ಟಿಯಿಂದ ಬೆಳಗಾವಿಗೆ ಕಡೆಗೆ ಹೊರಟಿದ್ದ (ಕಲಬುರಗಿ-ಬೆಳಗಾವಿ)ಬಸ್‌ಲ್ಲಿ 5.200 ಕೆಜಿ ಗಾಂಜಾ ಸಾಗಿಸುತ್ತಿದ್ದ.

ಖಚಿತ ಸುಳಿವಿನ ಮೇರೆಗೆ ದಾಳಿ ನಡೆಸಿದ ನೇಸರಗಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ನಡೆಸಿ, ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಂ.ಎಚ್.ಅಣ್ಣಯ್ಯ ಅವರು ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಜಿ.ಕೆ.ಮಾಹುರಕರ್ ವಾದ ಮಂಡಿಸಿದ್ದರು.