More

    ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಜಾರಕಿಹೊಳಿ ಸ್ಪರ್ಧೆ: ನಾಮಪತ್ರ ಸಲ್ಲಿಕೆ ವೇಳೆ ಬಾರದಂತೆ ಡಿಕೆಶಿಗೆ ಸೂಚನೆ

    ಬೆಂಗಳೂರು: ಬೆಳಗಾವಿಯಲ್ಲಿ ಲೋಕಸಭಾ ಉಪಸಮರ ಜೋರಾಗಿದ್ದು, ಕಾಂಗ್ರೆಸ್​ ಅಭ್ಯರ್ಥಿಯಾಗಿ ಸತೀಶ್​ ಜಾರಕಿಹೊಳಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಬೆಳಗಾವಿಗೆ ಬರಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಪಕ್ಷದ ಹಿರಿಯ ನಾಯಕರು ಸಲಹೆ ನೀಡಿದ್ದಾರಂತೆ!

    ಸೋಮವಾರ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಆ ಸಮಯದಲ್ಲಿ ಡಿ.ಕೆ. ಶಿವಕುಮಾರ್ ಹಾಜರಾಗಲು ಮುಂದಾಗಿದ್ದಾರೆ. ಆದರೆ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ ಬಯಲಿಗೆ ಬಂದಾಗಿನಿಂದ ರಮೇಶ್​ ಜಾರಕಿಹೊಳಿ ಕ್ಷೇತ್ರದಲ್ಲಿ ಬೆಂಬಲಿಗರು ಮತ್ತು ಕುಟುಂಬಸ್ಥರು ಸಿಟ್ಟಾಗಿದ್ದಾರೆ. ಹಾಗಾಗಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಅಚಾತುರ್ಯ ಮಾಡಬಹುದು ಎನ್ನುವ ಆಂತಕ ವ್ಯಕ್ತಪಡಿಸಿರುವ ಉ.ಕ. ಭಾಗದ ಹಿರಿಯ ನಾಯಕರು, ಬೆಳಗಾವಿಗೆ ನಾಮಪತ್ರ ಸಲ್ಲಿಕೆ ವೇಳೆ ಡಿಕೆಶಿ ಉಪಸ್ಥಿತಿ ಬೇಡ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿರಿ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ದೂರು! 3ನೇ ವಿಡಿಯೋದಲ್ಲಿ ಸ್ಫೋಟಕ ತಿರುವು

    ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಜಾರಕಿಹೊಳಿ ಸ್ಪರ್ಧೆ: ನಾಮಪತ್ರ ಸಲ್ಲಿಕೆ ವೇಳೆ ಬಾರದಂತೆ ಡಿಕೆಶಿಗೆ ಸೂಚನೆಹೀಗಾಗಿ ಸತೀಶ್​ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ವೇಳೆ ಜಿಲ್ಲೆಯ ಪ್ರಮುಖ ನಾಯಕರು ಸಾಥ್​ ಕೊಡುವ ಬಗ್ಗೆ ಹಿರಿಯ ನಾಯಕರು ಸಲಹೆ ಕೊಟ್ಟಿದ್ದಾರೆ. ಇದಕ್ಕೆ ಡೋಂಟ್​ಕೇರ್ ಎಂದಿರುವ ಡಿಕೆಶಿ, ಈಗಾಗಲೇ ಪ್ರವಾಸದ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಸೋಮವಾರ ನಾಮಪತ್ರ ಸಲ್ಲಿಕೆ ಸಮಯದಲ್ಲಿ ಹಾಜರಿರಲು ನಿರ್ಧಾರ ಮಾಡಿರುವ ಡಿಕೆಶಿ, ಭಾನುವಾರ ಸಂಜೆಯೇ ಬೆಳಗಾವಿಗೆ ಹೋಗುವುದಾಗಿ ತಿಳಿಸಿದ್ದಾರೆ.

    ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯನ್ನಾಗಿ ಸತೀಶ್ ಜಾರಕಿಹೊಳಿ ಹೆಸರನ್ನು ಎಐಸಿಸಿ ಘೋಷಣೆ ಮಾಡಿದ್ದು, ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್​, ಬೆಳಗಾವಿ ಲೋಕಸಭೆಯಿಂದ ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ. ಯಮಕನಮರಡಿ ಕ್ಷೇತ್ರದ ಜನಾಭಿಪ್ರಾಯ ಪಡೆಯಲು ಸಭೆ ನಡೆಸಿದ್ದೇನೆ. ಇಲ್ಲಿನ ಜನ ಬೆಳಗಾವಿ ಲೋಕಸಭೆಯಿಂದ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದಾರೆ. ಪಕ್ಷದ ತೀರ್ಮಾನ ಹಾಗೂ ಆದೇಶಕ್ಕೆ ನಾವು ಬದ್ಧ ಎಂದರು.

    ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ದೂರು! 3ನೇ ವಿಡಿಯೋದಲ್ಲಿ ಸ್ಫೋಟಕ ತಿರುವು

    ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

    ಅಕ್ಕಿ ಪಡೆಯಲು ಬಾಗಿಲು ತೆಗೆದ ಯುವತಿಯನ್ನ ಬೆತ್ತಲೆ ಮಾಡಿ ಚಿತ್ರೀಕರಿಸಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

    ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts