ಬೆಳಗಾವಿ ರಾಜಕಾರಣದಲ್ಲಿ ಡಿಕೆಶಿ ಹಸ್ತಕ್ಷೇಪ ತಪ್ಪು

ಬೆಳಗಾವಿ: ಸಚಿವ ಡಿ.ಕೆ.ಶಿವಕುಮಾರ್ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಿದ್ದು ತಪ್ಪು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಸಿದ್ಧತೆ ಸಭೆಯಲ್ಲಿ ಮಂಗಳವಾರ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಡಿಕೆಶಿ ಬೆಳಗಾವಿ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಿದ್ದನ್ನು ಖಂಡಿಸುವುದಿಲ್ಲ. ಆದರೆ ಬೆಂಗಳೂರಿನ ರಾಜಕಾರಣದಲ್ಲಿ ನಾವ್ಯಾರೂ ಹಸ್ತಕ್ಷೇಪ ಮಾಡುವುದಿಲ್ಲ. ಸಮಸ್ಯೆ ಇದ್ದಾಗ, ನಾವು ಆಹ್ವಾನ ನೀಡಿದಾಗ ಡಿ.ಕೆ.ಶಿವಕುಮಾರ್ ಬರಲಿ ಎಂದು ಟಾಂಗ್ ನೀಡಿದರು.

ರಾಜಕಾರಣಿಗಳ ವಾಗ್ವಾದ ಸಹಜ. ಅಷ್ಟಕ್ಕೂ ಬೆಳಗಾವಿ ರಾಜಕಾರಣದಲ್ಲಿ ತಲೆ ಎತ್ತಿದ್ದ ಸಮಸ್ಯೆ ಬಗೆಹರಿದಿದೆ. ಶೋ ಪೀಸ್‌ಗಳ ಮಾತು ಕೇಳಿದರೆ ಕಾಂಗ್ರೆಸ್ ಹಾಳಾಗಲಿದೆ ಎಂದು ಯಾರ ಹೆಸರು ಪ್ರಸ್ತಾಪಿಸದೇ ಹೇಳಿದರು.

ಪಿಎಲ್ಡಿ ಬ್ಯಾಂಕ್ ಚುನಾವಣೆ ವಿಚಾರವಾಗಿ ಉಂಟಾದ ಸಮಸ್ಯೆಯನ್ನು ಸ್ಥಳೀಯ ಶಾಸಕಿ ಬಗೆಹರಿಸುತ್ತಾರೆ.ಚುನಾವಣೆ ಸಂಬಂಧ ಶಾಸಕಿ ಹೆಬ್ಬಾಳ್ಕರ್ ಜತೆ ಮಾತನಾಡಿಲ್ಲ. ಸತೀಶ ಈ ಬಗ್ಗೆ ನನ್ನ ಜತೆ ಚರ್ಚೆ ಮಾಡಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನಾಭಿಪ್ರಾಯಗಳು ಸಹಜ ಎಂದರು.