ಬೆಳಗಾವಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಪಿಕ್​ ಅಪ್​ ವಾಹನ: 6 ಮಂದಿ ದುರಂತ ಸಾವು

BLG Accident
Published on

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ಪಿಕ್​ ಅಪ್​ ವಾಹನ ಮರಕ್ಕೆ ಡಿಕ್ಕಿಯಾದ ಪರಿಣಾಮ 6 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ಸಂಭವಿಸಿದೆ.

ಸವದತ್ತಿ ಯಲ್ಲಮ್ಮ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಪಿಕ್​ ಅಪ್​ ವಾಹನ ಅಪಘಾತಕ್ಕೀಡಾಗಿದೆ. ಐದು ಜನ ಸ್ಥಳದಲ್ಲಿ ಮೃತಪಟ್ಟರೆ, ಓರ್ವ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಹನಮ್ಮವ್ವ(24), ದೀಪಾ (31), ಸವಿತಾ(12), ಸುಪ್ರೀತಾ(11), ಮಾರುತಿ(42) ಹಾಗೂ ಇಂದ್ರವ್ವಾ(24) ಮೃತರು. ಗಾಯಾಳುಗಳನ್ನು ಗೋಕಾಕ್ ಸೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಹನದಲ್ಲಿದ್ದವರು ರಾಮದುರ್ಗ ತಾಲೂಕಿನ‌ ಹುಲಕುಂದ ಗ್ರಾಮದ ಯಾತ್ರಾರ್ಥಿಗಳು. ಎಲ್ಲರು ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ‌ ದೇವಸ್ಥಾನಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net