More

    ಬೆಳಗಾವಿಯಲ್ಲಿ ಡಿ. 19 ರಿಂದ 30ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನ

    ಬೆಳಗಾವಿ: ಡಿಸೆಂಬರ್ 19 ರಿಂದ 30ರವರೆಗೆ ಕುಂದಾ ನಗರಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ಇಂದು (ನ.17) ತೀರ್ಮಾನ ಮಾಡಿದೆ.

    ವಿಧಾನಸೌಧದಲ್ಲಿಂದು ನಡೆದ ಕ್ಯಾಬಿನೆಟ್​ ಮೀಟಿಂಗ್​ನಲ್ಲಿ ಚಳಿಗಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಯಿತು. ಈ ವೇಳೆ ಸಚಿವರು, ಶಾಸಕರು ಮತ್ತು ಅಧಿಕಾರಿಗಳು ಹಾಜರಿದ್ದರು.

    ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿಗೆ ಅನುಮೋದನೆ ನೀಡಲಾಯಿತು. ಪತಿ-ಪತ್ನಿ ವರ್ಗಾವಣೆಗೆ ಏಳು ವರ್ಷ ನಿಗಧಿ, ಏಳು ಹೊಸ ವನ್ಯಜೀವಿ ಸಂರಕ್ಷಣಾ ಮೀಸಲು ಪ್ರದೇಶ ಪ್ರಸ್ತಾವನೆಗಳಿಗೆ ಅನುಮೋದನೆ, ರಾಮನಗರದಲ್ಲಿ ರಾಜೀವ್ ಗಾಂಧಿ ವೈದ್ಯಕೀಯ ವಿವಿ ಸ್ಥಾಪನೆಗೆ ಅಸ್ತು, ನಿಮ್ಮನೆ ಸುಮ್ಮನೆ ಎನ್​ಜಿಒಗೆ 15 ಗುಂಟೆ ಭೂಮಿ ಮಂಜೂರು, ಏಳು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

    ಇಷ್ಟೇ ಅಲ್ಲದೆ, ರಾಜ್ಯದಲ್ಲಿ ಹೊಸದಾಗಿ ಉತ್ತಾರೆಗುಡ್ಡ ವನ್ಯಜೀವಿಧಾಮ, ಬಂಕಾಪುರ ವನ್ಯಜೀವಿಧಾಮ, ಅರಸೀಕೆರೆ ಕರಡಿ ಲಗತ್ತಿ ಧಾಮ, ಹಿರೆಸೂಲೇಕೆರೆ ಕರಡಿ ಸಂರಕ್ಷಣಾ ಮೀಸಲು ಪ್ರದೇಶ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ, ಮುಂಡಿಗೆ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ ಮತ್ತು ಬೋನಾಳ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶಗಳನ್ನು ಘೋಷಿಸುವ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.

    ಚಿಕ್ಕಬಳ್ಳಾಪುರದಲ್ಲಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಾಣ ಮಾಡಲು ತೀರ್ಮಾನ, ಕೆಸಿ ಜನರಲ್ ಆಸ್ಪತ್ರೆಯಲ್ಲಿ ಟ್ರಾಮಾಕೇರ್ ಸೆಂಟರ್, ಇಎಸ್​ಐ ಆಸ್ಪತ್ರೆ ಉಪಕರಣ ಖರೀದಿಗೆ 44 ಕೋಟಿ ರೂ ಬಿಡುಗಡೆಗೆ ಒಪ್ಪಿಗೆ, ನಂಜನಗೂಡು ಶ್ರೀಕಂಠೇಶ್ವರ ದೇಗುಲ ವಿಐಪಿ ಕೊಠಡಿ ನಿರ್ಮಾಣಕ್ಕೆ 16 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ಮತ್ತು 48 ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.

    ಅಶ್ಲೀಲ ಮೆಸೇಜ್​ ಆರೋಪ; ರಾಣಿ ವಿರುದ್ದ ಕೇಸ್​ ಹಾಕಲು ಡಿಂಗ್ರಿ ನಾಗರಾಜ್​ ತೀರ್ಮಾನ

    ನಾನು ರಾಜಕೀಯ ಬಿಟ್ರೂ ಮಂಡ್ಯ ಬಿಡಲ್ಲ: ಸುಮಲತಾ ಅಂಬರೀಶ್​

    https://www.vijayavani.net/police-return-stolen-gold-chain-to-the-owner-at-home/

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts