ಬೆಳಪು ಪಾಲಿಟೆಕ್ನಿಕ್ ಕಾಲೇಜು ಕ್ರೀಡಾಕೂಟ

polytechnic
ಬೆಳಪು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕ್ರೀಡಾಕೂಟವನ್ನು ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು. ಮನೋಹರ ಆಚಾರ್ಯ ಮತ್ತಿತರರು ಇದ್ದರು.
Published on

ಪಡುಬಿದ್ರಿ: ಬೆಳಪುವಿನಲ್ಲಿ ತಾಂತ್ರಿಕ ಕಾಲೇಜು ಸ್ಥಾಪಿಸುವ ಮೂಲಕ ಬಡ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವಾಗಿದೆ. ಶೀಘ್ರದಲ್ಲಿಯೇ ಮಕ್ಕಳಿಗೆ ವಸತಿನಿಲಯ ಮತ್ತು ಆವರಣಗೋಡೆ ರಚಿಸಲು ಕ್ರಮಕೈಗೊಳ್ಳಲಾಗುವುದು ಎಂದು ಬೆಳಪು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಹೇಳಿದರು.

ಬೆಳಪು ಪಂಚಾಯಿತಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೆಳಪು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಪ್ರಾಂಶುಪಾಲ ಮನೋಹರ ಆಚಾರ್ಯ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net